ಹಿರಿಯ ಪತ್ರಕರ್ತ ಕೆ ಜೆ. ಕುಮಾರ್ ನಿಧನ
ಮೈಸೂರು-ಮಾರ್ಚ್.11- ಮೈಸೂರಿನ ಹಿರಿಯ ಪತ್ರಕರ್ತ ಕೆ. ಜೆ. ಕುಮಾರ್ ಇಂದು ಸಂಜೆ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74…
ಮೈಸೂರು-ಮಾರ್ಚ್.11- ಮೈಸೂರಿನ ಹಿರಿಯ ಪತ್ರಕರ್ತ ಕೆ. ಜೆ. ಕುಮಾರ್ ಇಂದು ಸಂಜೆ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.ಉಡುಪಿ ಜಿಲ್ಲೆ ಕೊರಂದರ ಪಾಳ್ಯದಲ್ಲಿ ರಘು ರಾಮ್ ಶೆಟ್ಟಿ ಮತ್ತು ಶಾರದಾ ಅವರ ಜ್ಯೋಷ್ಠ ಪುತ್ರರಾಗಿ 1952ರ್ ನವಂಬರ್. 6 ರಂದು ಜನಿಸಿದರು. ಸುಮಾರು 56 ವರ್ಷಗಳಿಂದ ಮೈಸೂರಿನ ಪ್ರಮುಖ ಪತ್ರಿಕಾ ವಿತರಕರಾಗಿ ಹಾಗೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು. 1969ರಲ್ಲಿ ಸೋದರ ಮಾವ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಸ್ವತಂತ್ರ ಹೋರಾಟಗಾರ ಎ….
ಕೊಚ್ಚಿಯಲ್ಲಿ ನಡೆದ ಅಖಿಲ ಕೇರಳ ದೀವರ ಸಭಾದ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ, ₹10 ಸಾವಿರ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಮೂಲಕ ಕೇರಳದಲ್ಲಿ ಚುನಾವಣಾ ಪ್ರಚಾರದ ರಣಕಹಳೆ ಮೊಳಗಿಸಿದರು. ಇದೇ ವೇಳೆ ಕೊಲ್ಲಿ ರಾಷ್ಟ್ರಗಳಲ್ಲಿರುವ ಲಕ್ಷಾಂತರ ಭಾರತೀಯರ ಸುರಕ್ಷತೆಯ ಬಗ್ಗೆ ಭರವಸೆ ನೀಡಿದ ಅವರು, ಸಂಕಷ್ಟದ ಸಮಯದಲ್ಲಿ ಇಂದಿನ ಭಾರತ ತನ್ನ ಜನರನ್ನು ಕೈಬಿಡುವುದಿಲ್ಲ ಎಂದರು. ವಿದೇಶಿ ಸರ್ಕಾರಗಳು ನೀಡುತ್ತಿರುವ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತಲೇ, ಇಂತಹ ಜಾಗತಿಕ ಬಿಕ್ಕಟ್ಟಿನ…
ದಿನಾಂಕ 10/03/2026 ರಂದು ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣಾ ಸರಹದ್ದಿನ ಮದ್ದೂರು ತಾಲ್ಲೂಕು, ಆತಗೂರು ಹೋಬಳಿ, ನಿಡಘಟ್ಟ ಗ್ರಾಮದ ತಿನ್ನೂರು ರಸ್ತೆಯಲ್ಲಿರುವ ಶ್ರೀ ವರದರಾಜಸ್ವಾಮಿ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್ ಕಟ್ಟಡದಲ್ಲಿ ಅಕ್ರಮವಾಗಿ ಮತ್ತು ಕಾನೂನು ಬಾಹಿರವಾಗಿ ಗುಂಪುಗೂಡಿಕೊಂಡು ಅಂದರ್-ಬಾಹರ್ ಜೂಜಾಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಡಾ. ಶೋಭಾರಾಣಿ ವಿಜೆ, ಐಪಿಎಸ್ ರವರ ಆದೇಶದ ಮೇರೆಗೆ, ಘನ ನ್ಯಾಯಾಲಯದ ಅನುಮತಿ ಪಡೆದು ಕಾರ್ಯಾಚರಣೆ ರೂಪಿಸಲಾಯಿತು. ಮಳವಳ್ಳಿ…
ನವದೆಹಲಿ: ಗಲ್ಫ್ ರಾಷ್ಟ್ರಗಳ ಸಂಘರ್ಷ ತಾರಕಕ್ಕೇರಿದ್ದು, ಲೆಬನಾನ್‌ನ ಜನವಸತಿ ಪ್ರದೇಶಗಳ ಮೇಲೆ ಇಸ್ರೇಲ್ ಅತ್ಯಂತ ಅಪಾಯಕಾರಿ ‘ವೈಟ್ ಫಾಸ್ಫರಸ್’ (ಬಿಳಿ ರಂಜಕ) ಬಾಂಬ್‌ಗಳನ್ನು ಬಳಸಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇರಾನ್ ಬೆಂಬಲಿತ ಹೆಜ್ಬುಲ್ಲಾ ಗುಂಪುಗಳ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಈ ವಿಷಕಾರಿ ರಾಸಾಯನಿಕ ಬಳಕೆಯಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ವಿಶ್ವಸಂಸ್ಥೆಯ ಕೆಂಗಣ್ಣು ನಾಗರಿಕ ಪ್ರದೇಶಗಳಲ್ಲಿ ಬಿಳಿ ರಂಜಕದ ಬಳಕೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆಯೆಂದು ಪರಿಗಣಿಸಲ್ಪಟ್ಟಿದೆ. ಈ ಹಿಂದೆಯೂ…
ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ತೆರಳುವ ಸಂದರ್ಭದಲ್ಲಿ ಮೊಬೈಲ್ ಕಳೆದು ಕೊಂಡಿದ್ದ ಪ್ರಯಾಣಿಕರೊಬ್ಬರ ಮೊಬೈಲನ್ನು ಹಿಂದಿರುಗಿಸುವ ಮೂಲಕ ಬಸ್ಸಿನ ನಿರ್ವಾಹಕರೊಬ್ಬರು ಪ್ರಾಮಾಣಿಕತೆ ಮೆರೆದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಮಂಡ್ಯ – ಆದಿಚುಂಚನಗಿರಿ ನಡುವೆ ಸಂಚರಿಸುವ ನಾಗಮಂಗಲ ಡಿಪೋಗೆ ಬಸ್ಸಿನ ನಿರ್ವಾಹಕ ಸತೀಶ್ ಬಿ.ಎಸ್.ಮೊಬೈಲನ್ನು ಹಿಂದಿರುಗಿಸಿ ಮಾನವೀಯತೆ ಮರೆದಿದ್ದಾರೆ. ಏನಿದು ಘಟನೆ ? ಮಂಡ್ಯ ತಾಲ್ಲೂಕಿನ ಹನಿಯಂಬಾಡಿ ಗ್ರಾಮದ ಮಂಜುಳ ಹಾಗೂ ಅವರ ಪತಿ ಎನ್.ಶೇಖರ್ ಅವರು ಭಾನುವಾರ ಬೆಳಿಗ್ಗೆ ಮಂಡ್ಯದಿಂದ ಆದಿಚುಂಚನಗಿರಿಗೆ ಬಸ್ಸಿನಲ್ಲಿ ತೆರಳುತ್ತಿದ್ದರು. ಆ ಸಂದರ್ಭದಲ್ಲಿ ಮಂಜುಳ…
ಮಾರ್ಚ್ 9ರಂದು ಬೆಂಗಳೂರಿನಲ್ಲಿ ನಡೆದ ರಾಜಕೀಯ ಬೆಳವಣಿಗೆಗಳು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಂಚಲನ ಮೂಡಿಸಿವೆ. “ಹೈಕಮಾಂಡ್ ಅವಕಾಶ ನೀಡಿದರೆ ಮುಂದಿನ ಎರಡು ವರ್ಷಗಳ ಕಾಲ ನಾನೇ ಬಜೆಟ್ ಮಂಡಿಸುತ್ತೇನೆ” ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಭಾನುವಾರ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದ ಶಿವಕುಮಾರ್, ಅಲ್ಲಿಂದ ನೇರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ವಿಮಾನದಲ್ಲಿ ದೆಹಲಿಗೆ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಹೊಸಕೋಟೆ ಗ್ರಾಮದ ಮೂಲದ ದರ್ಶನ್ (29) ಮತ್ತು ಪತ್ನಿ ದಿವ್ಯಶ್ರೀ (25) ಮೃತಪಟ್ಟವರು. ಮೃತ ದಂಪತಿ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದು, ಕೆ.ಆರ್. ಪೇಟೆಯ ಜಯನಗರ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದರ್ಶನ್ ಕಾರು ಚಾಲಕನಾಗಿ ಕೆಲಸ ಮಾಡುತ್ತಾ ಕೃಷಿಯಲ್ಲೂ ತೊಡಗಿಸಿಕೊಂಡಿದ್ದರೆ, ದಿವ್ಯಶ್ರೀ ಪ್ಯಾರಾ ಮೆಡಿಕಲ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ದಂಪತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ ಎನ್ನಲಾಗಿದ್ದು,…
ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಚಾಮರಾಜನಗರ ಜಿಲ್ಲೆಯ ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದ ಅಮಾಯಕ ಯುವಕರ ಮೇಲೆ ಖಾಕಿ ಪಡೆ ದರ್ಪ ಮೆರೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಂದಹಳ್ಳಿ ಗ್ರಾಮದ ಶಿವರಾಜು ಹಾಗೂ ಕುಮಾರ್ ಎಂಬುವವರು ತಮ್ಮ ಮೊಬೈಲ್ ಕಳ್ಳತನವಾಗಿರುವ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳ ಸಮೇತ ದೂರು ನೀಡಲು ಠಾಣೆಗೆ ತೆರಳಿದ್ದರು. ಆದರೆ, ಅಲ್ಲಿ ನ್ಯಾಯ ಸಿಗುವ ಬದಲು ಪೊಲೀಸರ ಹಲ್ಲೆ ಮತ್ತು ಅವಾಚ್ಯ ಶಬ್ದಗಳ ನಿಂದನೆ ಎದುರಾಗಿದೆ ಎಂದು ಸಂತ್ರಸ್ತರು ಅಳಲು…
ಮಂಡ್ಯ ಜಿಲ್ಲೆಯ ಕೃಷಿಕರ ಜೀವನಾಡಿಯಾದ ಕೃಷಿ ಚಟುವಟಿಕೆಗಳಿಗೆ ಹೊಸ ಆಯಾಮ ನೀಡುವ ಉದ್ದೇಶದಿಂದ, ಅತೀ ಕಡಿಮೆ ನೀರನ್ನು ಬಳಸಿ ನೈಸರ್ಗಿಕವಾಗಿ ಸಾವಯವ ಕೃಷಿ ಮಾಡುವ ಕುರಿತು ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಗೌರವಾನ್ವಿತ ಶ್ರೀ ಶ್ರೀ ಕಾಡು ಸಿದ್ದೇಶ್ವರ ಸ್ವಾಮೀಜಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ರೈತರಿಗೆ ಉಪಯುಕ್ತ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ. ಕಾರ್ಯಕ್ರಮದ ವಿವರಗಳು: ಈ ಒಂದು ದಿನದ ಕಾರ್ಯಾಗಾರಕ್ಕೆ ಬರುವ ಆಸಕ್ತ ರೈತ ಬಾಂಧವರಿಗೆ ಪ್ರವೇಶ ಉಚಿತವಾಗಿರುತ್ತದೆ. ಆದರೆ, ಸೀಮಿತ ಅವಕಾಶಗಳಿರುವುದರಿಂದ ರೈತರು ಕಡ್ಡಾಯವಾಗಿ ತಮ್ಮ…
ವರದಿ : ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಚಾಮರಾಜನಗರ: ಖಾಕಿ ಅಂಗಿಯ ಅಹಂಕಾರ ಹಾಗೂ ಕೈಬಿಸಿ ಮಾಡುವ ಚಾಳಿ ಕೊನೆಗೂ ಒಬ್ಬ ಮುಖ್ಯ ಪೇದೆಯ ಕೆಲಸಕ್ಕೆ ಕುತ್ತು ತಂದಿದೆ! ಬಡ ಸವಾರನಿಗೆ ಕಿರುಕುಳ ನೀಡಿ, ಲಂಚಕ್ಕಾಗಿ ಆಮಿಷವೊಡ್ಡಿದ ಆರೋಪದ ಮೇಲೆ ಚಾಮರಾಜನಗರ ನಗರ ಸಂಚಾರ ಠಾಣೆಯ ಮುಖ್ಯ ಪೇದೆ ಮಲ್ಲು ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಏನಿದು ಘಟನೆ? ಸಂಚಾರ ನಿಯಮ ಉಲ್ಲಂಘನೆ ಹೆಸರಲ್ಲಿ ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಲು ಮಲ್ಲು…