ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ವೇಗವಾಗಿ ಬಂದ ಟ್ರಕ್ ಹರಿದು 8 ಮಂದಿ ಗಣೇಶ ಭಕ್ತರು ಸಾವನ್ನಪ್ಪಿದ ದುರ್ಘಟನೆ ಹಾಸನ ತಾಲ್ಲೂಕಿನ ಮೊಸಳೆಹೊಸಹಳ್ಳಿ ಗ್ರಾಮದ ಬಳಿ ನಡೆದಿದೆ.
ಇಂದು ಶುಕ್ರವಾರ ರಾತ್ರಿ ಈ ದುರಂತ ಘಟಿಸಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ 20 ಕ್ಕೂ ಹೆಚ್ಚಿನ ಗಣೇಶ ಭಕ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆ ಮತ್ತು ಹೊಳೆನರಸೀಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಭೀಕರ ಅಪಘಾತದ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿ ಬಂದ ಹಾಸನ ಜಿಲ್ಲೆಯ ಎಎಸ್ಪಿ ನೇತೃತ್ವದ ಪೊಲೀಸರು ಪರಿಶೀಲನೆ ನಡೆಸಿದರು.
ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ತಿಳಿದುಬಂದಿದೆ.
ಈ ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕನನ್ನು ಹಿಡಿದು ಗಣೇಶ ಭಕ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.

