Headlines

ಸೆ. 17 ರಿಂದ ಅ. 2 ರವರೆಗೆ ಗ್ರಾಮೀಣ ಸಮುದಾಯದಲ್ಲಿ ಸ್ವಚ್ಛೋತ್ಸವ: ಕೆ.ಆರ್.ನಂದಿನಿ

ಮಂಡ್ಯ.ಸೆ.16:– ಜಿಲ್ಲೆಯ ಎಲ್ಲಾ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಅಂಗವಾಗಿ ಸ್ವಚ್ಛತಾ ಹೀ ಸೇವಾ ಅಥವಾ ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಜನಾಂದೋಲನವನ್ನು ಹಮ್ಮಿಕೊಂಡಿದ್ದು, ಈ ಪ್ರಯುಕ್ತ ಸ್ವಚ್ಛತಾ ಹೀ ಸೇವಾ 2025 ಅಭಿಯಾನವನ್ನು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ *”ಸ್ವಚೋತ್ಸವ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.

ಪ್ರತಿ ವರ್ಷ ಅಕ್ಟೋಬರ್ 2ರಂದು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿದ್ದು, ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲಪಡಿಸಲು 2017 ರಿಂದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ.

ಈ ಯೋಜನೆ, ಸಾಧನೆಯ ಮೈಲಿಗಳನ್ನು ಗೌರವಿಸಲು ಸ್ವಚ್ಛತಾ ಹೀ ಸೇವಾ 2025 ಅಭಿಯಾನವನ್ನು ಆಚರಿಸಲಾಗುತ್ತಿದೆ. ಅಭಿಯಾನದ ಅವಧಿಯಲ್ಲಿ ಸ್ವಚ್ಛತೆಗಾಗಿ ಬೃಹತ್ ಪ್ರಮಾಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಮತ್ತು ಸಮುದಾಯದ ಭಾಗವಹಿಸುವಿಕೆ. ಅನೈರ್ಮಲ್ಯ ಮತ್ತು ಸಮಸ್ಯಾತ್ಮಕ ಕಸದ ತಾಣಗಳನ್ನು ತೆರವುಗೊಳಿಸಲು ಗಮನಹರಿಸುವ ಬೃಹತ್ ಸ್ವಚ್ಛತಾ ಅಭಿಯಾನಗಳು, ನೈರ್ಮಲ್ಯ ಕಾರ್ಮಿಕರ ಕೊಡುಗೆಯನ್ನು ಗುರುತಿಸಿವುದು ಹಾಗೂ ಸಫಾಯಿ ಮಿತ್ರ ಸುರಕ್ಷಾ ಶಿಬಿರಗಳ ಆಯೋಜಿಸುವಿಕೆ ಮತ್ತು ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವುದು ಹಾಗೂ ಕಳೆದ ದಶಕದ ಸಾಧನೆಗಳ ಆಚರಣೆ ಮತ್ತು ಸಂಪೂರ್ಣ ಸ್ವಚ್ಛತೆಗೆ ನಮ್ಮ ಬದ್ದತೆಯನ್ನು ಪುನರುಚ್ಛರಿಸಲಾಗುವುದು.

ಸ್ವಚ್ಛತಾ ಹೀ ಸೇವಾ ಅಭಿಯಾನವನ್ನು ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅನೈರ್ಮಲ್ಯ ಸ್ಥಳಗಳ ಗುರುತಿಸುವಿಕೆ, ಸಫಾಯಿ ಮಿತ್ರ ಸುರಕ್ಷಾ ಶಿಬಿರಗಳ ಆಯೋಜಿಸುವಿಕೆ, ಸ್ವಚ್ಛ ಹಸಿರು ಉತ್ಸವಗಳ ಆಚರಣೆ, ವಿವಿಧ ಪ್ರಚಾರ ಚಟುವಟಿಕೆಗಳು, ಒಂದು ದಿನ ಒಂದು ಗಂಟೆ ಸಾಮೂಹಿಕ ಸ್ವಚ್ಛತಾ ಶ್ರಮದಾನ ಹಾಗೂ ಇನ್ನಿತರ ಕ್ರಿಯಾಶೀಲ ಕಾರ್ಯಕ್ರಮಗಳನ್ನು ರೂಪಿಸಿ ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳ ಜನರ ಸಹಭಾಗಿತ್ವ ಬಹುಮುಖ್ಯವಾಗಿದೆ.

ಸ್ವಚೋತ್ಸವ ಅಭಿಯಾನದಲ್ಲಿ ಸರ್ವರೂ ಒಗ್ಗಟ್ಟಿನಿಂದ ಭಾಗವಹಿಸಿ ಕಾರ್ಯಕ್ರವಮವನ್ನು ಯಶಸ್ವಿಗೊಳಿಸಿ ಜಿಲ್ಲೆಯನ್ನು ಕಸ ಮುಕ್ತ ಪರಿಸರ ಸ್ನೇಹಿ ಜಿಲ್ಲೆಯನ್ನಾಗಿ ಪರಿವರ್ತಿಸಲು ಸಹಕರಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!