ಮಂಡ್ಯ.ಸೆ.17:- ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ: ಕುಮಾರ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರುಗಳು ಇಂದು ಬೆಂಗಳೂರಿನ ಖ್ಯಾತ ಚಲನಚಿತ್ರ ನಿರ್ದೇಶಕ ನಾಗಭರಣ ಅವರ ಕಚೇರಿಗೆ ಭೇಟಿ ನೀಡಿ ಅವರನ್ನು ಸೆಪ್ಟೆಂಬರ್ 25 ರಂದು ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸುವಂತೆ ಆತ್ಮೀಯವಾಗಿ ಆಹ್ವಾನಿಸಿದರು.
ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ನಿರ್ದೇಶಕ ನಾಗಭರಣಗೆ ಆಹ್ವಾನ

