Headlines

ಶಾಸಕರು ಹಾಗೂ ಜಿಲ್ಲಾಧಿಕಾರಿಗಳಿಂದ ಶ್ರೀರಂಗಪಟ್ಟಣ ದಸರಾ ಸ್ಥಳ ಪರಿಶೀಲನೆ

ಮಂಡ್ಯ.ಸೆ.19:- ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹಾಗೂ ಜಿಲ್ಲಾಧಿಕಾರಿ ಡಾ; ಕುಮಾರ ಅವರು ಇಂದು ಶ್ರೀರಂಗಪಟ್ಟಣ ದಸರಾ ಕುರಿತು ಸ್ಥಳ ಪರಿಶೀಲನೆ ನಡೆಸಿದರು.

ಶ್ರೀ ರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿನ ಶ್ರೀರಂಗ ವೇದಿಕೆ ಕಾಮಗಾರಿಯ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.

ದಸರಾ ಉದ್ಘಾಟನಾ ಸ್ಥಳವಾದ ಕಿರಂಗೂರು ಬನ್ನಿಮಂಟಪಕ್ಕೆ ಭೇಟಿ ನೀಡಿ ಸುಣ್ಣ- ಬಣ್ಣ ಪೂರ್ಣಗೊಂಡಿರುವ ಬಗ್ಗೆ ಪರಿಶೀಲಿಸಿದರು.

ಈ ಸಂಧರ್ಭದಲ್ಲಿ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದು, ಕಳೆದ ವರ್ಷದಂತೆ ಈ ವರ್ಷವೂ ಸಹ ಯಶಸ್ವಿಯಾಗಿ ದಸರಾ ಉತ್ಸವವನ್ನು ನಡೆಸಲು ಎಲ್ಲಾ ಅಧಿಕಾರಿಗಳು ಸಹಕರಿಸಲು ತಿಳಿಸಿದರು.

ಪೊಲೀಸ್ ಇಲಾಖೆಯಿಂದ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಲು ತಿಳಿಸಲಾಯಿತು

ವೇದಿಕೆ ನಿರ್ಮಾಣದಲ್ಲಿ ಯಾವುದೇ ಲೋಪವಿಲ್ಲದಂತೆ ನಿರ್ಮಾಣ ವಾಗಬೇಕು. ವಾಹನಗಳ ನಿಲುಗಡೆಗೆ ಸರಿಯಾದ ಸ್ಥಳವನ್ನು ನಿಗದಿಪಡಿಸುವಂತೆ ತಿಳಿಸಲಾಯಿತು.

ಕಾರ್ಯಕ್ರಮ ರೂಪುರೇಶೆಗಳನ್ನು ಸಿದ್ಧಪಡಿಸಲು ರಚಿಸಲಾಗುವ ವಿವಿಧ ಸಮಿತಿಗಳು ಯಾವುದೇ ಲೋಪ ಬಾರದಂತೆ ವಹಿಸಿರುವ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಡೆಸಲು ಸೂಚಿಸಿದರು.

ವೇದಿಕೆ ಬಳಿ ವಿವಿಧ ಇಲಾಖೆಗಳಿಂದ ಮಳಿಗೆ ನಿರ್ಮಾಣ ಮಾಡಿ ಸ್ಥಳೀಯ ಉತ್ಪನ್ನಗಳ ಮಾರಾಟಕ್ಕೆ ಅಗತ್ಯ ಕ್ರಮವಹಿಸಲು ಮತ್ತು ಬನ್ನಿಮಂಟಪ ಹಾಗೂ ವೇದಿಕೆ ನಿರ್ಮಾಣದಲ್ಲಿ ಶುಚಿತ್ವದಲ್ಲಿ ರಾಜಿಯಿಲ್ಲದಂತೆ ಕ್ರಮವಹಿಸಲು ತಿಳಿಸಲಾಯಿತು.

ಪರಿಶೀಲನೆ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಶ್ರೀರಂಗಪಟ್ಟಣ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೇಣು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!