ಮಂಡ್ಯ.ಅ.10:- ಹಣ ದುರುಪಯೋಗ, ಅಧಿಕಾರ ದುರುಪಯೋಗ ಮತ್ತು ಕರ್ತವ್ಯ ಲೋಪವೆಸಗಿದ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದ್ದು ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾ ಪಂಚಾಯತ್, ಸಿಇಓ ನಂದಿನಿ ಕೆ.ಆರ್. ಅವರು ತಿಳಿಸಿದರು.
ಕಳೆದ 10 ತಿಂಗಳಿನಲ್ಲಿ ಈ ರೀತಿಯ ಪ್ರಕರಣಗಳ ಬಗ್ಗೆ ತ್ವರಿತವಾಗಿ ಕ್ರಮಗಳನ್ನು ತೆಗೆದುಕೊಂಡು ಅಂತರ ತಾಲ್ಲೂಕು ಸಮಿತಿಗಳು ಮತ್ತು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚನೆ ಮಾಡಿ ಮೇಲ್ನೋಟಕ್ಕೆ ಆರೋಪ ಸಾಬೀತಾಗಿದೆ ಎಂದು ವರದಿಯಾಗಿರುವ ಪ್ರಕರಣಗಳಲ್ಲಿ ಸಂಬAಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತ್ತುಗೊಳಿಸಲಾಗಿದೆ ಎಂದು ತಿಳಿಸಿದರು.
ಗೋಪಾಲಪುರ: ಕರ್ತವ್ಯ ಲೋಪ ಎಸಗಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ದಿನಾಂಕ:17-04-2025ರAದು ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತ್ತುಗೊಳಿಸಲಾಗಿತ್ತು.
ಇಂಡುವಾಳು: ಇ-ಸ್ವತ್ತು ವಿತರಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಇಂಡುವಾಳು ಗ್ರಾಮ ಪಂಚಾಯತ್ ನ ಹಿಂದಿನ ಪಂಚಾಯತ್ ಅಭಿವೃದ್ದಿ ಅಧಿಕಾರಿ, ಪ್ರಸ್ತುತ ಮುಂಡುಗದೊರೆ ಗ್ರಾಮ ಪಂಚಾಯತ್ ನಲ್ಲಿ ಕರ್ತವ್ಯನಿರ್ವಹಿಸುತ್ತಿದ್ದು, ಇವರನ್ನು ದಿನಾಂಕ:29-05-2025ರAದು ಅಮಾನತ್ತುಗೊಳಿಸಲಾಗಿತ್ತು. ಇದೇ ಪ್ರಕರಣಕ್ಕೆ ಸಂಬAಧಿಸಿದAತೆ ಹಾಲಿ ಇಂಡುವಾಳು ಗ್ರಾಮ ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಂಚಾಯತ್ ಅಭಿವೃದ್ದಿ ಅಧಿಕಾರಿಯನ್ನು ಸಹ ದಿನಾಂಕ:29-05-2025ರAದು ಅಮಾನತ್ತು ಮಾಡಲಾಗಿತ್ತು.
ಮುರುಕನಹಳ್ಳಿ: ಸಾರ್ವಜನಿಕರಿಂದ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸ್ ರ ವಶಕ್ಕೆ ಪಡೆಯಲಾಗಿದ್ದ ಮುರುಕನಹಳ್ಳಿ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಸಹ ದಿನಾಂಕ:25-08-2025ರAದು ಅಮಾನತ್ತು ಮಾಡಲಾಗಿತ್ತು.
ಗೊಂಡೇನಹಳ್ಳಿ: ಗೊಂಡೇನಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಹೆಚ್ಚುವರಿ ಪ್ರಭಾರದಲ್ಲಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಹಣ ದುರುಪಯೋಗ ಮಾಡಿಕೊಂಡ ಹಿನ್ನೆಲೆಯಲ್ಲಿ ಸದರಿಯವರನ್ನು ದಿನಾಂಕ:03-10-2025ರAದು ಅಮಾನತ್ತು ಮಾಡಲಾಗಿತ್ತು.
ಇದೇ ಪ್ರಕರಣಕ್ಕೆ ಸಂಬAಧಿಸಿದAತೆ ಗೊಂಡೇನಹಳ್ಳಿ ಗ್ರಾಮ ಪಂಚಾಯತ್ ನ ಡಿಇಓ ಕಂ ಕಂಪ್ಯೂಟರ್ ಆಪರೇಟರ್ ಅವರ ವಿರುದ್ದವು ಸಹ ಶಿಸ್ತು ಕ್ರಮ ತೆಗೆದುಕೊಳ್ಳಲು ತಾ.ಪಂ. ಇಓ ರವರಿಗೆ ಸೂಚಿಸಲಾಗಿದೆ.
ಮಂದಗೆರೆ: ಹಣ ದುರುಪಯೋಗ, ಕರ್ತವ್ಯ ಲೋಪ ಹಾಗೂ ಗ್ರಾ.ಪಂ.ನ ಚುನಾಯಿತ ಸದಸ್ಯರೊಂದಿಗೆ ಅನುಚಿತ ವರ್ತನೆ ತೋರಿದ ಮಂದಗೆರೆ ಗ್ರಾಮ ಪಂಚಾಯತ್ ನ ಪಿಡಿಓ ರವರನ್ನು ದಿನಾಂಕ:09-10-2025ರAದು ಅಮಾನತ್ತುಗೊಳಿಸಲಾಗಿರುತ್ತದೆ.
ಮಂದಗೆರೆ ಗ್ರಾ.ಪಂ.ನಲ್ಲಿ ನರೇಗಾ ಯೋಜನೆಯಲ್ಲಿಯೂ ಕರ್ತವ್ಯ ಲೋಪವಾಗಿರುವ ಬಗ್ಗೆ ದೂರುಗಳು ಸ್ವೀಕೃತವಾಗಿದ್ದು, ಸದರಿ ದೂರಿನ ಬಗ್ಗೆ ತನಿಖೆ ನಡೆಸಲು ತಂಡವನ್ನು ರಚಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ನರೇಗಾ ಯೋಜನೆಯ ಹೊರಗುತ್ತಿಗೆ ಸಿಬ್ಬಂದಿಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
ಲಕ್ಷ್ಮೀಪುರ: ನರೇಗಾ ಯೋಜನೆಯಡಿ ರಸ್ತೆ ಬದು ನೆಡು ತೋಪು ಕಾಮಗಾರಿಯಲ್ಲಿ ಕಾಮಗಾರಿ ನಡೆಸದೇ ಹಣ ಪಾವತಿಸಿರುವ ದೂರಿಗೆ ಸಂಬAಧಿಸಿದAತೆ ಜಿಲ್ಲಾ ಮಟ್ಟದ ತನಿಖಾ ತಂಡವನ್ನು ರಚಿಸಲಾಗಿದ್ದು, ಸದರಿ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಹಂತದ ಅಧಿಕಾರಿ, ಸಿಬ್ಬಂದಿ ಹಾಗೂ ಹೊಗುತ್ತಿಗೆ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಜಿ.ಪಂ. ಸಿಇಓ ತಿಳಿಸಿದರು.
ಇದೇ ರೀತಿಯಲ್ಲಿ ಹಣದುರುಪಯೋಗ ಹಾಗೂ ಅಧಿಕಾರ ದುರುಪಯೋಗ ಪ್ರಕರಣಗಳಲ್ಲಿ ಭಾಗಿಯಾಗಿರುವ ಇತರ ಸಿಬ್ಬಂದಿಗಳು ಹಾಗೂ ಇತರರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗಿದ್ದು, ಈ ರೀತಿಯ ಕ್ರಮಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಜಿ.ಪಂ. ಸಿಇಓ ರವರು ಸೂಚಿಸಿದರು.

