ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಮಂಡ್ಯ ಜಿಲ್ಲಾ ಘಟಕದ ವತಿಯಿಂದ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಂಡ್ಯ ನಗರದಲ್ಲಿರುವ ಸುಭಾಷ್ ನಗರ 6 ನೇ ಕ್ರಾಸ್, ಶಿವಾನಂಜಪ್ಪ ಪಾರ್ಕ್ ಮುಂಭಾಗದಲ್ಲಿರುವ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ಥಳೀಯ ಹಿರಿಯ ನ್ಯಾಯವಾದಿ ಬಿ.ಟಿ. ವಿಶ್ವನಾಥ್ ಅವರು ಹಾಗೂ ರೈತ ಸಂಘದ ಮುಖಂಡರಾದ ಅಣ್ಣಯ್ಯ ಗೌಡರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ನ್ಯಾಯವಾದಿ ಬಿ.ಟಿ. ವಿಶ್ವನಾಥ್ ಅವರು ಮಾತನಾಡಿ, ಭ್ರಷ್ಟಾಚಾರ ನಿರ್ಮೂಲನೆ, ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆ, ಸಂವಿಧಾನದ ಆಶಯಗಳ ಪಾಲನೆ ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗವನ್ನು ಸ್ಮರಿಸುವ ಅಗತ್ಯ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ KRS ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಹೋರಾಟಗಾರರು ಭಾಗವಹಿಸಿ, ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಹಾಗೂ ಜನಪರ ಆಡಳಿತಕ್ಕಾಗಿ ನಿರಂತರವಾಗಿ ಹೋರಾಡುವ ಸಂಕಲ್ಪ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ದೇಶದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುವುದು, ಭ್ರಷ್ಟಾಚಾರ ಮುಕ್ತ ಆಡಳಿತವನ್ನು ನಿರ್ಮಿಸುವುದು ಹಾಗೂ ಜನರ ಹಕ್ಕು ಮತ್ತು ಸ್ವಾಭಿಮಾನವನ್ನು ಕಾಪಾಡುವ ಅಗತ್ಯತೆಯ ಕುರಿತು ಪಕ್ಷದ ಮುಖಂಡರು ಮಾತನಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನ ಕಾರ್ಯದರ್ಶಿ ನಿಕಟ ಪೂರ್ವ ಉಸ್ತುವಾರಿ ಅರುಣ ಕುಮಾರ್, ಮಂಡ್ಯ ಜಿಲ್ಲಾಧ್ಯಕ್ಷರು ಮಲ್ಲೇಶ, ರಾಜ್ಯ ಯುವ ಘಟಕದ ಕಾರ್ಯದರ್ಶಿ ಪ್ರಮೋದ ಎಸ್, ಮಂಡ್ಯ ತಾಲ್ಲೂಕು ಅಧ್ಯಕ್ಷರು ಜಯರಾಮ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರಾಜ ವೆಂಕಟೇಶ್, ಯುವ ಘಟಕದ ಅಧ್ಯಕ್ಷೆ ದೀಪಿಕಾ, ಕೆಂಪಮ್ಮ, ಮಲ್ಲೇಶ್, ಮುರುಳಿಧರ್, ಜಯಪ್ರಕಾಶ್, ಬಾಲರಾಜ್, ಶ್ರೀನಿವಾಸ್, ರಮೇಶ್.ಲೋಕಿ ಆಟೋ ಹಾಗೂ ಸೈನಿಕರು ಭಾಗಿಯಾಗಿದ್ದರು

