Headlines

ಕುಕ್ಕುಟ ಸಂಜೀವಿನಿ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿ:ಕೆ.ಆರ್.ನಂದಿನಿ

ಮಂಡ್ಯ.ಜು.16:- ಸ್ವ ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡಲು ಸರ್ಕಾರದಲ್ಲಿ ಅವಕಾಶವಿದೆ. ಆಸಕ್ತಿ ಹೊಂದಿರುವ ಸ್ವಸಹಾಯ ಗುಂಪುಗಳನ್ನು ಕುಕ್ಕುಟ ಸಂಜೀವಿನಿ ಯೋಜನೆಯಡಿ ಸೌಲಭ್ಯ ಪಡೆಯಲು ಪ್ರಸ್ತಾವನೆ ಸಲ್ಲಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ ಅವರು ಹೇಳಿದರು.

ಮಂಗಳವಾರ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯ ಲಾಭ ಪಡೆದು ಮೇಕೆ ಮತ್ತು ಕೋಳಿ ಸಾಕಾಣಿಕೆಯಲ್ಲಿ ಯಶಸ್ಸು ಕಂಡ ಮದ್ದೂರು ತಾಲೂಕಿನ ತೈಲೂರು ಗ್ರಾಮದ ಕೃಷಿಕ ಜಗದೀಶ್ ಅವರ “ಗೌರಮ್ಮ ನಾಟಿ ಮೇಕೆ ಫಾರ್ಮ್” ಗೆ ಭೇಟಿ ನೀಡಿದರು.

ಜಗದೀಶ್ ಅವರ ಫಾರ್ಮ್ ನಲ್ಲಿ ವಿವಿಧ ತಳಿಯ ಮೇಕೆಗಳ ಕುರಿತು ಮಾಹಿತಿ ಪಡೆದ ಅವರು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುತ್ತಾ ಲಾಭದ ಹಾದಿಯಲ್ಲಿ ಮುನ್ನಡೆದಿರುವ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಗದೀಶ್ ಅವರ ನಡೆ ಇತರ ಕೃಷಿಕರಿಗೂ ಸ್ಪೂರ್ತಿದಾಯಕವಾಗಿದೆ ಎಂದು ಹೇಳಿದರು.

ಕುಕ್ಕುಟ ಸಂಜೀವಿನಿ ಯೋಜನೆಯಡಿ ಕೋಳಿ ಸಾಕಾಣಿಕೆಗೆ ಆಸಕ್ತಿ ಹೊಂದಿರುವ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳನ್ನು ಹಾಗೂ ಕೋಳಿ ಸಾಕಾಣಿಕೆಗೆ ಸೂಕ್ತ ಸ್ಥಳಾವಕಾಶವನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನಂತರ ತೈಲೂರು ಗ್ರಾಮದ ಪಶು ಚಿಕಿತ್ಸಾಲಯ ಆಸ್ಪತ್ರೆಗೆ ಭೇಟಿ ನೀಡಿದ ಅವರು ರಾಸುಗಳಿಗೆ ಕೃತಕ ಗರ್ಭಧಾರಣೆ ಮಾಡುತ್ತಿರುವ ಕುರಿತು ಹಾಗೂ ಕಾಲುಬಾಯಿ ಜ್ವರ ಲಸಿಕೆ ಹಾಕಿರುವ ಬಗ್ಗೆ ಪರಿಶೀಲಿಸಿದರು. ಆಸ್ಪತ್ರೆಯ ಹೊರರೋಗಿ ವಹಿ ಹಾಗೂ ಚಿಕಿತ್ಸಾ ವಿವರಗಳ ವಹಿಗಳನ್ನು ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!