Headlines

ಆಗಸ್ಟ್ 11 ರಿಂದ ಕರ್ನಾಟಕ ಮುಂಗಾರು ಅಧಿವೇಶನ ಆರಂಭ

ಬೆಂಗಳೂರು, ಜುಲೈ 18: ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ ಆರಂಭವಾಗಲಿದೆ. ಇದರಂತೆ ಇತ್ತ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಸಹ ಆಗಸ್ಟ್ 11ರಿಂದ ಆರಂಭವಾಗಲಿದೆ. ಈ ಬಗ್ಗೆ ರಾಜ್ಯಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಆಗಸ್ಟ್ 11ರಿಂದ ಆಗಸ್ಟ್ 22ರವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ಇನ್ನು ಆಗಸ್ಟ್ 11ರಂದು ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಒಟ್ಟು 12 ದಿನಗಳ ಪೈಕಿ 8 ದಿನ ಮಾತ್ರ ಅಧಿವೇಶನ ನಡೆಯಲಿದೆ.

ಈ ಕುರಿತಂತೆ ರಾಜ್ಯಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ನನಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕ ರಾಜ್ಯಪಾಲರು ಆದ ನಾನು 2025ರ ಆಗಸ್ಟ್ 11ರಂದು ಸೋಮವಾರ ಬೆಳಗ್ಗೆ 11ಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಮಂಡಲದ ಅಧಿವೇಶನ ಸಮಾವೇಶಗೊಳಿಸಬೇಕೆಂದು ಈ ಮೂಲಕ ಕರೆಯುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.

ಇನ್ನು ಕರ್ನಾಟಕ ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಆಗಸ್ಟ್ 11 ಸೋಮವಾರದಿಂದ 22-08-2025ರವರೆಗೆ ವಿಧಾನಮಂಡಲದ ಕಲಾಪಗಳು ನಡೆಯಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ವಿಧಾನಸಭೆಯ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿ ಇಂತಿದೆ:

ಆಗಸ್ಟ್ 11ರಂದು ಸರ್ಕಾರಿ ಕಾರ್ಯಕಲಾಪಗಳು

ಆಗಸ್ಟ್ 12ರಂದು ಸರ್ಕಾರಿ ಕಾರ್ಯಕಲಾಪಗಳು

ಆಗಸ್ಟ್ 13ರಂದು ಸರ್ಕಾರಿ ಕಾರ್ಯಕಲಾಪಗಳು

ಆ.14ರಂದು ಖಾಸಗಿ-ಸರ್ಕಾರಿ ಕಾರ್ಯಕಲಾಪಗಳು

ಆಗಸ್ಟ್ 15ರಂದು ಸಾರ್ವತ್ರಿಕ ರಜಾದಿನ

ಆ.16ರಂದು 2ನೇ ಶನಿವಾರ ಆಗಿರುವುದರಿಂದ ಸರ್ಕಾರಿ ಕಾರ್ಯಕಲಾಪಗಳು ಇರುವುದಿಲ್ಲ.

ಆಗಸ್ಟ್ 17 ರಂದು ಭಾನುವಾರ ಸಾರ್ವಜನಿಕ ರಜಾದಿನ.

ಆಗಸ್ಟ್ 18 ರಂದು ಸರ್ಕಾರಿ ಕಾರ್ಯಕಲಾಪಗಳು.

ಆಗಸ್ಟ್ 19ರಂದು ಸರ್ಕಾರಿ ಕಾರ್ಯಕಲಾಪಗಳು.

ಆಗಸ್ಟ್ 20ರಂದು ಸರ್ಕಾರಿ ಕಾರ್ಯಕಲಾಪಗಳು.

ಆಗಸ್ಟ್‌ 21ರಂದು ಖಾಸಗಿ-ಸರ್ಕಾರಿ ಕಾರ್ಯಕಲಾಪಗಳು.

ಆಗಸ್ಟ್ 22ರಂದು ಸರ್ಕಾರಿ ಕಾರ್ಯಕಲಾಪಗಳು.

Leave a Reply

Your email address will not be published. Required fields are marked *

error: Content is protected !!