ಹಾಸನ, ಜುಲೈ 26: ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ಆಯೋಜಿಸಿದ ಗ್ಯಾರಂಟಿ ಯೋಜನೆ ಫಲಾನುಭವಿ ಸಮಾವೇಶದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದರು.
ಈ ವೇಳೆ ಅಬ್ಬರದ ಭಾಷಣ ಮಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ತಮ್ಮ ಮಾತುಗಳ ಕೊನೆಯಲ್ಲಿ ಸ್ಥಳೀಯ ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡರ ಪರ ಮಾತನಾಡಿ ಇವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದಾಗ ಜಮೀರ್ ಅಹ್ಮದ್ ಮತ್ತು ಕೆ.ಎಂ ಶಿವಲಿಂಗೇಗೌಡ ದೇವೇಗೌಡರ ಕುಟುಂಬಕ್ಕೆ ಹತ್ತಿರವಾಗಿದ್ದರು. ಹಾಗಾಗಿ, ತಮ್ಮ ಹಳೆಯ ದೋಸ್ತಿಯನ್ನು ಮಂತ್ರಿ ಮಾಡಬೇಕೆಂದು ಜಮೀರ್ ಕೈಜೋಡಿಸಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರನ್ನು ಕೇಳಿಕೊಂಡರು.
ಶಾಸಕ ಕೆ.ಎಂ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಿ ಎಂದ ಸಚಿವ ಜಮೀರ್

