Headlines

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರು ಸೇರಿ ರಾಜ್ಯದ 14 ಕಡೆ ಎನ್ಐಎ ದಾಳಿ

ಮಂಗಳೂರು, ಆಗಸ್ಟ್ 2: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್​ನಲ್ಲಿ 4 ಕಡೆ ಹಲವರ ಮನೆ, ಕಚೇರಿ ಮೇಲೆ ದಾಳಿ ಮಾಡಿರುವ ಎನ್ಐಎ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಕೆಲವರನ್ನು ವಿಚಾರಣೆಗೂ ಒಳಪಡಿಸಿದ್ದಾರೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು‌. ಹತ್ಯೆ ಮಾಡಿದ ಮತ್ತು ಹತ್ಯೆಗೆ ಸಹಕರಿಸಿದವರು ಸೇರಿದಂತೆ 12‌ ಜನರನ್ನು ಬಜಪೆ ಪೊಲೀಸರು ಬಂಧಿಸಿದ್ದರು. ಬಳಿಕ ಕೇಂದ್ರ ಗೃಹ ಇಲಾಖೆ ಈ ಪ್ರಕರಣವನ್ನ ಎನ್​ಐಎ ಹೆಗಲಿಗೆ ನೀಡಿತ್ತು.

ಸುಹಾಸ್ ಶೆಟ್ಟಿ ಹೆತ್ತವರು ಕೂಡ ಎನ್​ಐಎ ತನಿಖೆ ಮೂಲಕ ಮಾತ್ರ ತಮ್ಮ ಮಗನ‌ ಸಾವಿಗೆ ನ್ಯಾಯ ಸಿಗುತ್ತೇ ಎಂದು ಒತ್ತಿಯಿಸಿದ್ದರು. ಈ‌ ಮಧ್ಯೆ ಅವರು ರಾಜ್ಯಪಾಲರ ಮೂಲಕ ಪ್ರಕರಣವನ್ನು ಎನ್​ಐಎಗೆ ನೀಡುವಂತೆ ಮನವಿ ಮಾಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೂ‌ ಈ ಹತ್ಯೆಯ ಹಿಂದಿರುವ ಶಕ್ತಿಗಳ ಬಗ್ಗೆ ಗಮನಕ್ಕೆ ತಂದಿದ್ದರು. ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಇಲಾಖೆಯೇ ಸುಹಾಸ್ ಹತ್ಯೆ ಪ್ರಕರಣವನ್ನು ಎನ್​​ಐಎಗೆ ವಹಿಸಿತ್ತು.

ಈ ಹತ್ಯೆ ಬಳಿಕ ಹಿಂದೂ ಮತ್ತು ಬಿಜೆಪಿ ಮುಖಂಡರು ಈ ಪ್ರಕರಣವನ್ನು ಎನ್​ಐಎ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸುತ್ತಲೇ ಬಂದಿದ್ದರು. ಪ್ರಕರಣದಲ್ಲಿ ನಿಷೇಧಿತ ಪಿಎಫ್​ಐ ಸಂಘಟನೆ ನೇರವಾಗಿ ಭಾಗಿಯಾಗಿದೆ, ಜೊತೆಗೆ ಹತ್ಯೆಗೆ ವಿದೇಶದಿಂದಲೂ ಹಣದ ಹೊಳೆ ಹರಿದು ಬಂದಿದೆ ಎಂದು ಆರೋಪಿಸಲಾಗಿತ್ತು.

ಜೂನ್ 1ರಂದು ರಾತ್ರಿ 8.30ಕ್ಕೆ ಮಂಗಳೂರು ಹೊರವಲಯದ ಬಜ್ಪೆಯ ಕಿನ್ನಿಪದವು ಎಂಬಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತು. ಈ ಘಟನೆಯಿಂದ ಕರಾವಳಿ ಕೆಂಡವಾಗಿತ್ತು.

Leave a Reply

Your email address will not be published. Required fields are marked *

error: Content is protected !!