Headlines

ಪ್ರಧಾನಿ ಮೋದಿಯವರ ನಾಳಿನ‌ ಬೆಂಗಳೂರು ಕಾರ್ಯಕ್ರಮಗಳ ವೇಳಾಪಟ್ಟಿ..

ಬೆಂಗಳೂರು, ಆಗಸ್ಟ್ 9: ಮೆಟ್ರೋದ ಹಳದಿ ಮಾರ್ಗ​ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್​ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಕುರಿತು ವೇಳಾಪಟ್ಟಿ ಹಂಚಿಕೊಂಡಿರುವ ಸಿಎಂ ಕಚೇರಿ, ಮೋದಿ 4 ಗಂಟೆಗಳ ಕಾಲ ಇರಲಿದ್ದು, ಈ ವೇಳೆ ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 10.30ಕ್ಕೆ ಹೆಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ, ಕೆಎಸ್​ಆರ್​ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಲಿದ್ದು, ಅಲ್ಲಿ ಬೆಂಗಳೂರು- ಬೆಳಗಾವಿ ನಡುವೆ ವಂದೇ ಭಾರತ್​ ಟ್ರೈನ್​​ ಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ವರ್ಚುವಲ್​ ಆಗಿ ಅಮೃತ್​ಸರ್​- ಶ್ರೀ ಮತಾ ವೈಷ್ಣೋದೇವಿ ಕತ್ರಿ ಹಾಗೂ ಅಜ್ನಿ (ನಾಗಪುರ್​)- ಪುಣೆಯ ಮತ್ತೆರಡು ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲಿಗೆ ಚಾಲನೆ ನೀಡಲಿದ್ದಾರೆ.

ಭಾನುವಾರ ಈ ರಸ್ತೆಗಳು ಬಂದ್, ಪರ್ಯಾಯ ಮಾರ್ಗಗಳು ಹೀಗಿವೆ:
ಬಳಿಕ ರಸ್ತೆ ಮಾರ್ಗದ ಮೂಲಕ ಆರ್​ವಿ ರಸ್ತೆ (ರಾಗಿಗುಡ್ಡ) ಮೆಟ್ರೋ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 11.45ರಿಂದ 12.50ರ ನಡುವೆ ಹಳದಿ ಮಾರ್ಗ ಲೋಕಾರ್ಪಣೆ ಮಾಡಿ, ಎಲೆಕ್ಟ್ರಾನಿಕ್​ ಸಿಟಿ ಸ್ಟೇಷನ್​ವರೆಗೆ ಮೆಟ್ರೋ ಪ್ರಯಾಣ ನಡೆಸಲಿದ್ದಾರೆ. 19.15 ಕಿ.ಮೀ ಉದ್ದದ ಆರ್​ವಿ ರಸ್ತೆಯಿಂದ ಬೊಮ್ಮಸಂದ್ರ ಸಾಗಲಿರುವ ಹಳದಿ ಮೆಟ್ರೋ ಮಾರ್ಗದಲ್ಲಿ 16 ಸ್ಟೇಷನ್​ ಬರಲಿದ್ದು, ಇದನ್ನು 5,056.99 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.

ಇದಾದ ಬಳಿಕ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಬೆಂಗಳೂರಿಗೆ ಆಗಮಿಸಿಲಿದ್ದು, ಇಲ್ಲಿ ಬೆಂಗಳೂರು ಮೆಟ್ರೋದ 3ನೇ ಹಂತಕ್ಕೆ ಶಂಕುಸ್ಥಾಪನೆ ನೀಡಲಿದ್ದಾರೆ. ಬಳಿಕ ಹೆಲಿಕಾಪ್ಟರ್​ ಮೂಲಕ ಹೆಚ್​ಎಎಲ್​ಗೆ ತೆರಳಿ, 2.45ಕ್ಕೆ ದೆಹಲಿಯತ್ತ ಪ್ರಯಾಣ ಬೆಳಸಲಿದ್ದಾರೆ. ಮೆಟ್ರೋ 3ಹಂತದ ಯೋಜನೆ ಆರೇಂಜ್​ ಲೈನ್ (ಕಿತ್ತಾಳೆ ಮಾರ್ಗ)​ ಆಗಿದ್ದು, ಇದು 44.65 ಕಿ.ಮೀ ದೂರ ಹೊಂದಿದ್ದು, ಇದನ್ನು ಅಂದಾಜು 15.611 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಇದಕ್ಕೆ ಕೂಡ ಮೋದಿ ಶಂಕು ಸ್ಥಾಪನೆ ನಡೆಸಲಿದ್ದಾರೆ.

ಹಳದಿ ಲೈನ್​ ಮೆಟ್ರೋ ನಿಲ್ದಾಣ ಉದ್ಘಾಟನೆ ಹಿನ್ನೆಲೆ ಈ ಮಾರ್ಗದಲ್ಲಿ ಟ್ರಾಫಿಕ್​ ದಟ್ಟಣೆ ಇರಲಿದ್ದು, ಹೊಸೂರು ರಸ್ತೆ, ಸಿಲ್ಕ್​ ಬೋರ್ಡ್​ ಜಂಕ್ಷನ್​ ಮತ್ತು ಎಲೆಕ್ಟ್ರಾನಿಕ್ಸ್​ ಸಿಟಿ ಜಂಕ್ಷನ್​ನಲ್ಲಿ ಪ್ರಯಾಣಿಕರ ಸಂಚಾರ ದಟ್ಟಣೆ ಉಂಟಾಗಲಿದೆ.

ನಾಳಿನ ಮೋದಿ ಬೆಂಗಳೂರು ವೇಳಾಪಟ್ಟಿ ಹೀಗಿದೆ..

ಆಗಸ್ಟ್​ 10, ಬೆಳಗ್ಗೆ 7.50ಕ್ಕೆ ನವದೆಹಲಿಯಿಂದ ಹೊರಡಲಿರುವ ನರೇಂದ್ರ ಮೋದಿ.
ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್ ಎಎಲ್ ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್

ಬೆಳಗ್ಗೆ 10.35ಕ್ಕೆ ಹೆಲಿಕಾಫ್ಟರ್ ಮೂಲಕ ಹೆಚ್ ಎಎಲ್ ಏರ್ ಪೋರ್ಟ್ ನಿಂದ ಟೇಕಾಫ್

ಬೆಳಗ್ಗೆ 10.55ಕ್ಕೆ ಮೇಖ್ರಿ ಸರ್ಕಲ್‌ನ ಹೆಚ್ ಕ್ಯೂಟಿಸಿ ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್

ಬೆಳಗ್ಗೆ 11 ಗಂಟೆಗೆ ಹೆಚ್ ಕ್ಯೂ ಟಿಸಿ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ಕೆಎಸ್ಆರ್ ರೈಲ್ವೇ ನಿಲ್ದಾಣಕ್ಕೆ ಪ್ರಯಾಣ.

ಮಾರ್ಗ ಮಧ್ಯೆ ಮೇಖ್ರಿ ವೃತ್ತ, ಚಾಲುಕ್ಯ ವೃತ್ತ ಮತ್ತು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರಧಾನಿಗೆ ಸ್ವಾಗತ.

ಬೆಳಗ್ಗೆ 11.10ಕ್ಕೆ ಕೆಎಸ್ಆರ್ ರೈಲ್ವೇ ನಿಲ್ದಾಣಕ್ಕೆ ಪ್ರಧಾನಿ ಆಗಮನ

ಬೆಳಗ್ಗೆ 11.15ರಿಂದ 11.20ರವರೆಗೆ ಕೆಎಸ್ಆರ್ ರೈಲ್ವೇ ನಿಲ್ದಾಣದಲ್ಲಿ 3 ವಂದೇ ಮಾತರಂ ರೈಲುಗಳಿಗೆ ಚಾಲನೆ.

ಬೆಳಗ್ಗೆ 11.25ಕ್ಕೆ ಕೆಎಸ್ಆರ್ ರೈಲ್ವೇ ನಿಲ್ದಾಣದಿಂದ ಪ್ರಧಾನಿ ನಿರ್ಗಮನ.

ರಸ್ತೆ ಮಾರ್ಗವಾಗಿ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಮೋದಿ ಪ್ರಯಾಣ.

ಮಾರ್ಗ ಮಧ್ಯೆ ಸಂಗೊಳ್ಳಿ ರಾಯಣ್ಣ ವೃತ್ತ, ಸೌತ್ ಎಂಡ್ ವೃತ್ತ ಮತ್ತು ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಪ್ರಧಾನಿಗೆ ಬಿಜೆಪಿ ಕಾರ್ಯಕರ್ತರ ಸ್ವಾಗತ

ಬೆಳಗ್ಗೆ 11.45ಕ್ಕೆ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಆಗಮನ.

ಬೆಳಗ್ಗೆ 11.45ರಿಂದ ಮಧ್ಯಾಹ್ನ 12.50ರವರೆಗೆ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ

ಮಧ್ಯಾಹ್ನ 12.50ಕ್ಕೆ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣಕ್ಕೆ ಆಗಮನ

ಮಧ್ಯಾಹ್ನ 12.55ಕ್ಕೆ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಐಐಐಟಿ ಸಭಾಂಗಣಕ್ಕೆ ಆಗಮನ

ಮಧ್ಯಾಹ್ನ 1 ಗಂಟೆಗೆ ಸಭಾ ಕಾರ್ಯಕ್ರಮದ ವೇದಿಕೆಗೆ ಪ್ರಧಾನಿ ಆಗಮನ

ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಐಐಐಟಿ ಆಡಿಟೋರಿಯಂನಲ್ಲಿ ಸಭಾ ಕಾರ್ಯಕ್ರಮ

ಮಧ್ಯಾಹ್ನ 1.25ಕ್ಕೆ ಆರ್ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಹಳದಿ ಮಾರ್ಗ ಉದ್ಘಾಟನೆ ಮತ್ತು ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ

ಮಧ್ಯಾಹ್ನ 1.30ರಿಂದ 2 ಗಂಟೆಯವರೆಗೆ ಪ್ರಧಾನಿ ಮೋದಿ ಭಾಷಣ.
ಮಧ್ಯಾಹ್ನ 2.05ಕ್ಕೆ ಕಾರ್ಯಕ್ರಮದ ವೇದಿಕೆಯಿಂದ ಪ್ರಧಾನಿ ನಿರ್ಗಮನ

ಮಧ್ಯಾಹ್ನ 2.15ಕ್ಕೆ ರಸ್ತೆ ಮಾರ್ಗವಾಗಿ ಹೆಲಿಪ್ಯಾಡ್ ಗೆ ಆಗಮನ

ಮಧ್ಯಾಹ್ನ 2.20ಕ್ಕೆ ಹೆಲಿಕಾಫ್ಟರ್ ಮೂಲಕ ಹೆಚ್ಎಎಲ್ ಏರ್ ಪೋರ್ಟ್ ಗೆ ನಿರ್ಗಮನ

ಮಧ್ಯಾಹ್ನ 2.40ಕ್ಕೆ ಹೆಚ್ ಎಎಲ್ ಏರ್ ಪೋರ್ಟ್ ‌ನಿಂದ ನವದೆಹಲಿಗೆ ಪ್ರಧಾನಿ ನರೇಂದ್ರ ಮೋದಿ ನಿರ್ಗಮನ.

Leave a Reply

Your email address will not be published. Required fields are marked *

error: Content is protected !!