ಬೆಂಗಳೂರು, ಆಗಸ್ಟ್ 12: ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನದ 2ನೇ ದಿನದ ಕಲಾಪ ನಡೆಯುತ್ತಿದೆ. ಸಚಿವ ಕೆ.ಎನ್ ರಾಜಣ್ಣ ತಲೆದಂಡ, ಆರ್.ಸಿ.ಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿವೆ. ಇದರ ನಡುವೆ ಇಂದು(ಆಗಸ್ಟ್ 12) ಬರೋಬ್ಬರಿ 15 ವಿಧೇಯಕಗಳು ಮಂಡನೆಯಾಗಿವೆ. ಸಚಿವರಾದ ಪರಮೇಶ್ವರ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಸಂತೋಷ್ ಲಾಡ್, ಎಂ.ಸಿ ಸುಧಾಕರ್ ಹಾಗೂ ಬೋಸರಾಜು ಪರವಾಗಿ ಕಾನೂನು ಸಚಿವ ಎಚ್.ಕೆ ಪಾಟೀಲ್ ವಿವಿಧ ಇಲಾಖೆಗೆ ಸಂಬಂಧಿಸಿದ 15 ವಿಧೇಯಕಗಳನ್ನ ಮಂಡನೆ ಮಾಡಿದ್ದಾರೆ.
ವಿಧಾನಸಭೆ ಅಧಿವೇಶನದ 2ನೇ ದಿನವಾದ ಇಂದು ಒಂದೇ ದಿನ ಬರೋಬ್ಬರಿ 15 ವಿಧೇಯಕಗಳನ್ನು ಮಂಡಿಸಲಾಗಿದೆ. ಗೃಹ ಸಚಿವ ಪರಮೇಶ್ವರ್, ಆರೋಗ್ಯ ಸಚಯ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಹಾಗೂ ಬೋಸರಾಜು ಪರವಾಗಿ ಎಲ್ಲಾ 15 ವಿಧೇಯಕಗಳನ್ನ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರು ಮಂಡಿಸಿದರು.
ಮಂಡನೆಯಾದ 15 ವಿಧೇಯಕಗಳಿವು…
2025ನೇ ಸಾಲಿನ ಕರ್ನಾಟಕ ಅಗ್ನಿಶಾಮಕದಳ (ತಿದ್ದುಪಡಿ) ವಿಧೇಯಕ ಮಂಡನೆ.
2025ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳ ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕ ಮಂಡನೆ.
2025ನೇ ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ ಮಂಡನೆ.
2025ನೇ ಸಾಲಿನ ಕರ್ನಾಟಕ ವೈದ್ಯಕೀಯ ನೋಂದಣಿ (ತಿದ್ದುಪಡಿ) ವಿಧೇಯಕ ಮಂಡನೆ.
2025ನೇ ಸಾಲಿನ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಮಂಡನೆ.
2025ನೇ ಸಾಲಿನ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
2025ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
2025ನೇ ಸಾಲಿನ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
2025ನೇ ಸಾಲಿನ ಕೂಡಲಸಂಗಮ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಮಂಡನೆ.
2025ನೇ ಸಾಲಿನ ಬನವಾಸಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
2025ನೇ ಸಾಲಿನ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
2025ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕ ಮಂಡನೆ.
2025ನೇ ಸಾಲಿನ ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕ ಮಂಡನೆ.
2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರಿಂದ ಒಂದು ವಿಧೇಯಕ ಮಂಡನೆ.
2025ನೇ ಸಾಲಿನ ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ ಮಂಡನೆ.

