Headlines

ಕೊನೆಗೂ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆ ಈಡೇರಿಸಿದ ಸರ್ಕಾರ

ಬೆಂಗಳೂರು, ಆಗಸ್ಟ್ 20: ಕರ್ನಾಟಕ ರಾಜ್ಯ ಸಚಿವ ಸಂಪುಟ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ಈಗಾಗಲೇ ಒಪ್ಪಿಗೆ ನೀಡಿದೆ. ಒಳ‌ ಮೀಸಲಾತಿ ಸಂಬಂಧ ನಡೆದ ವಿಶೇಷ ಸಂಪುಟ ಸಭೆಯಲ್ಲಿ ದಲಿತ ಸಮುದಾಯಕ್ಕೆ ಒಳ‌ ಮೀಸಲಾತಿ ಬಹುತೇಕ ಫೈನಲ್ ಆಗಿದೆ. ಇಂದು ಅಧಿಕೃತ ಘೋಷಣೆ ಮಾಡಲಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರು ಒಳ ಮೀಸಲಾತಿಗೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಸಮುದಾಯದವರು, ಅವರಿಗೆ ಹೂವಿನ ಹಾರ ಹಾಕಿ, ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯಕ್ಕೆ ಒಳ‌ ಮೀಸಲಾತಿ ಬಹುತೇಕ ಅಂತಿಮವಾಗಿದೆ. ಇಂದು ವಿಧಾನಸಭೆಯ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಲಿದ್ದಾರೆ.

ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ 5 ವರ್ಗೀಕರಣ ಮಾಡಲಾಗಿತ್ತು. ಸರ್ಕಾರ ಇದನ್ನು 3 ಗುಂಪುಗಳಾಗಿ ವರ್ಗೀಕರಣ ಮಾಡಿತು. ಎಡಗೈ ಸಮುದಾಯದಲ್ಲಿ 18 ಜಾತಿಗಳಿದ್ದು ಶೇ.6ರಷ್ಟು ಮೀಸಲಾತಿ, ಬಲಗೈ ಸಮುದಾಯದಲ್ಲಿ 20 ಜಾತಿಗಳಿದ್ದು ಶೇ.6ರಷ್ಟು ಮೀಸಲಾತಿ ಲಭಿಸಲಿದೆ. ಇತರ ಸಮುದಾಯದ 63 ಜಾತಿಗಳಿಗೆ ಶೇ.5ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಅಂತಿಮವಾಗಿದೆ. ಘೋಷಣೆಯಷ್ಟೇ ಬಾಕಿ ಉಳಿದಿದೆ.

Leave a Reply

Your email address will not be published. Required fields are marked *

error: Content is protected !!