Headlines

ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳಿಗೆ ಬ್ಲ್ಯಾಕ್‌ಮೇಲ್ ಆರೋಪ: ಖಾಸಗಿ ಸುದ್ದಿವಾಹಿನಿ ಮುಖ್ಯಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಒಳಾಡಳಿತ ಇಲಾಖೆ ಸೂಚನೆ

ಬೆಂಗಳೂರು: ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತಂದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎನ್ನಲಾದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಒಳಾಡಳಿತ ಇಲಾಖೆ ಸೂಚಿಸಿದೆ. ಈ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಿ, ಸರಕಾರಕ್ಕೆ ವರದಿ ಸಲ್ಲಿಸುವಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಅವರಿಗೆ ಅಧಿಕೃತ ಪತ್ರ ಬರೆದಿದ್ದಾರೆ.

​ಪ್ರಕರಣದ ಹಿನ್ನೆಲೆ:

ಸಚಿವರು, ಆಡಳಿತ ಪಕ್ಷದ ಶಾಸಕರು ಮತ್ತು ಪ್ರತಿಪಕ್ಷದ ಶಾಸಕರಿಗೆ ಹಣದ ಆಮಿಷವೊಡ್ಡಿ ಅಪರಾಧಕ್ಕೆ ಪ್ರಚೋದಿಸುವ ಮೂಲಕ ಸ್ಟಿಂಗ್ ಆಪರೇಷನ್ ನಡೆಸಲಾಗುತ್ತಿದೆ. ಈ ಮೂಲಕ ಜನಪ್ರತಿನಿಧಿಗಳ ತೇಜೋವಧೆ ಮಾಡಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್‌ಬಾಬು ಅವರು ಇತ್ತೀಚೆಗೆ ಸರಕಾರಕ್ಕೆ ಪತ್ರ ಬರೆದಿದ್ದರು.

​ಸುರೇಶ್‌ಬಾಬು ಅವರ ಮನವಿಯನ್ನು ಗಂಭೀರವಾಗಿ ಪರಿಗಣಿಸಿರುವ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ ರಾಕೇಶ್ ಶೆಟ್ಟಿ ಮತ್ತು ಸುದ್ದಿವಾಹಿನಿಯ ನೌಕರರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಂಡು ವರದಿ ನೀಡುವಂತೆ ಡಿಜಿಪಿಗೆ ನಿರ್ದೇಶನ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!