ಸಚಿವ ಜಮೀರ್ ಅಹ್ಮದ್ ಅವರು ತಮ್ಮ ವಸತಿ ಮತ್ತು ಅಲ್ಪಸಂಖ್ಯಾತ ಇಲಾಖೆಯಲ್ಲಿ ಅನುದಾನ ದುರ್ಬಳಕೆ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿತ್ತು. ಸದ್ಯ ದೂರಿನ ಬಗ್ಗೆ ಸ್ಪಷ್ಟನೆ ಕೇಳಿರುವ ರಾಜ್ಯಪಾಲರು ಕೆಲ ದಾಖಲೆಗಳ ಬಗ್ಗೆ ಮಾಹಿತಿ ಕೇಳಿದ್ದಾರೆ. ಒಂದು ವೇಳೆ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ರೆ ಸಚಿವ ಜಮೀರ್ಗೆ ಸಂಕಷ್ಟ ಎದುರಾಗಲಿದೆ.
ಅಲ್ಪಸಂಖ್ಯಾತ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಇದೇ ಅಸ್ತ್ರ ಹಿಡಿದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬಿದ್ದಿದ್ದವು. ಬಳಿಕ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಜೆಡಿಎಸ್ ದೂರು ನೀಡಿದ್ದು ಇದು ಸಚಿವ ಜಮೀರ್ಗೆ ಸಂಕಷ್ಟ ತಂದೊಡ್ಡಿದೆ.
ಮುಡಾ, ವಾಲ್ಮೀಕಿ ನಿಗಮ, ವಸತಿ ಇಲಾಖೆ ಬಳಿಕ ಅಲ್ಪಸಂಖ್ಯಾತ ಇಲಾಖೆಯಲ್ಲೂ ಅಕ್ರಮದ ಹೊಗೆಯಾಡ್ತಿದ್ದು ಸಚಿವ ಜಮೀರ್ ಅಹ್ಮದ್ ಸುತ್ತ ಹಗರಣ ಸುತ್ತಿಕೊಂಡಿದೆ. ಬರೋಬ್ಬರಿ 625 ಕೋಟಿ ಅನುದಾನ ದುರ್ಬಳಕೆ ಆರೋಪ ಕೇಳಿಬಂದಿದೆ. ಸಿಎಂ ಅನುಮೋದನೆಯನ್ನೇ ಪಡೆಯದೇ ಹಾಗೂ ಆರ್ಥಿಕ ಇಲಾಖೆಯ ಸಹಮತ ಇಲ್ಲದೇ ಗುತ್ತಿಗೆದಾರರ ಜೊತೆ ಶಾಮೀಲಾಗಿ ಸಚಿವ ಜಮೀರ್ ಅಹ್ಮದ್ ಖಾನ್ 625 ಕೋಟಿ ರೂ. ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆ ಬಳಿಕ ಜೆಡಿಎಸ್, ಸಚಿವ ಜಮೀರ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಿತ್ತು.
ಸಚಿವ ಜಮೀರ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಜೆಡಿಎಸ್ ವಕ್ತಾರ ಪ್ರದೀಪ್ ಕುಮಾರ್ ದೂರು ನೀಡಿದ್ದರು. ಸದ್ಯ ಪ್ರದೀಪ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಲಾವ್ ನೀಡಿದ್ದಾರೆ. ಕೆಲ ದಾಖಲೆಗಳ ಬಗ್ಗೆ ಮಾಹಿತಿ ನೀಡುವಂತೆ ಗವರ್ನರ್ ಸೂಚನೆ ನೀಡಿದ್ದಾರೆ. ಪ್ರದೀಪ್ ಕುಮಾರ್ ದೂರಿನ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ. ಇನ್ನು ಪ್ರಾಸಿಕ್ಯೂಷನ್ ರಾಜ್ಯಪಾಲರು ಅನುಮತಿ ಕೊಟ್ರೆ ಸಚಿವ ಜಮೀರ್ಗೆ ಸಂಕಷ್ಟ ಎದುರಾಗಲಿದೆ. ಅನುಮತಿ ನೀಡಿದ್ರೆ ಜನಪ್ರತಿನಿಧಿಗಳ ಕೋರ್ಟ್ಗೆ ದೂರು ನೀಡಲು ಜೆಡಿಎಸ್ ವಕ್ತಾರ ಪ್ರದೀಪ್ ನಿರ್ಧಾರ ಮಾಡಿದ್ದಾರೆನ್ನಲಾಗಿದೆ.
ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಚಿವ ಜಮೀರ್ ನಾನಂಥವನಲ್ಲ ಅಂತ ಅಬ್ಬರಿಸಿದ್ದರು. ಆದ್ರೆ ಅಲ್ಪಸಂಖ್ಯಾತ ಇಲಾಖೆಯ ಅನುದಾನ ದುರ್ಬಳಕೆ ಬಗ್ಗೆ ಇದುವರೆಗೂ ಖಾನ್ ಸಾಹೇಬ್ರು ತುಟಿಬಿಚ್ಚಿಲ್ಲ. ಇತ್ತ, ಸಿಎಂ ಸಿದ್ದರಾಮಯ್ಯ ಕೂಡ ಈ ಬಗ್ಗೆ ಮೌನಕ್ಕೆ ಜಾರಿದ್ದಾರೆ. ಸದ್ಯ ಈ ಕುರಿತ ದೂರು ರಾಜ್ಯಪಾಲರ ಅಂಗಳದಲ್ಲಿದೆ. ಒಂದು ವೇಳೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ರೆ ಜೆಡಿಎಸ್ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಲಿದೆ. ಬಳಿಕ ಸಚಿವ ಜಮೀರ್ ಕೋರ್ಟ್ ವಿಚಾರಣೆಯನ್ನು ಎದುರಿಸಬೇಕಾಗಿ ಬರುವ ಸಂಕಷ್ಟ ಎದುರಾಗಲಿದೆ.

