ಬೆಂಗಳೂರು, ಸೆ.14: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಯೂನಿಟ್ ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ. ಈಗಾಗಲೇ ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ಕೊಟ್ಟಿರುವ ಬೆಸ್ಕಾಂ, ಇದೀಗ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕರ್ನಾಟಕದಲ್ಲಿ ಮತ್ತೆ ಸರ್ಕಾರದಿಂದ ಕರೆಂಟ್ ಶಾಕ್ ಸಾಧ್ಯತೆ!

