Headlines

newsfilemagazine

ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣ ಮೃಗಗಳು ಶಂಕಾಸ್ಪದ ಸಾವು: ತನಿಖೆಗೆ ಅರಣ್ಯ ಸಚಿವರ ಆದೇಶ

ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮೊನ್ನೆ 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಶನಿವಾರ ಬೆಳಗ್ಗೆ ಮತ್ತೆ 20 ಕೃಷ್ಣಮೃಗಗಳು ಸಾವನ್ನಪ್ಪಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳುಮಾಹಿತಿ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು‌ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃಗಾಲಯದಲ್ಲಿರುವ ಕೃಷ್ಣಮೃಗಗಳುಈ ಸಂಬಂಧ ಡಿ.ಎಫ್​.ಒ. ಎನ್.ಇ.ಕ್ರಾಂತಿ ಅವರನ್ನು ಈಟಿವಿ ಭಾರತ ಪ್ರತಿನಿಧಿ ಸಂಪರ್ಕಿಸಿದಾಗ, ”ಬ್ಯಾಕ್ಟಿರಿಯಲ್ ಇನ್ಫೆಕ್ಷನ್​ನಿಂದ…

Read More

ನಕಲಿ ನಂದಿನಿ ತುಪ್ಪ ತಯಾರಿಕಾ ಜಾಲ ಭೇದಿಸಿದ ಸಿಸಿಬಿ ಪೊಲೀಸರು: ನಾಲ್ವರು ಅರೆಸ್ಟ್

ಬೆಂಗಳೂರು,ನ.15: ಕೆಎಂಎಫ್ ನ‌ ಜನಪ್ರಿಯ ಬ್ರಾಂಡ್ ನಂದಿನಿ ತುಪ್ಪವನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು ಬೇಧಿಸಿರುವ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಹೊರ ರಾಜ್ಯದಲ್ಲಿ ಕಲಬೆರೆಕೆ ತುಪ್ಪವನ್ನು ತಯಾರಿಸಿ ನಕಲಿ ನಂದಿನಿ ಬ್ರಾಂಡ್‌ನ ಸ್ಯಾಚೆಟ್‌ ಮತ್ತು ಪ್ಲಾಸ್ಟಿಕ್‌ ಬಾಟಲಿಗಳಲ್ಲಿ ತುಂಬಿ ಬೆಂಗಳೂರು ನಗರದಾದ್ಯಂತ ಮಾರಾಟ ಮಾಡುತ್ತಿದ್ದರು.ಈ ಬೃಹತ್‌ ಜಾಲದ ಬೆನ್ನು ಹತ್ತಿತ ಪೊಲೀಸರು ನಾಲ್ವರನ್ನು ಬಂಧಿಸುವ ಜೊತೆಗೆ 1,26,95,200 ರೂ. ವೌಲ್ಯದ 8136 ಲೀಟರ್‌ ನಂದಿನಿ ಬ್ರಾಂಡ್‌ನ ಕಲಬೆರೆಕೆ ತುಪ್ಪ ಹಾಗೂ ಸರಬರಾಜು ಮಾಡುತ್ತಿದ್ದ 4 ವಾಹನಗಳನ್ನು ವಶ…

Read More

ಪಾರದರ್ಶಕ ಆಡಳಿತಕ್ಕಾಗಿ ಮಾಹಿತಿ ಹಕ್ಕು ಕಾಯ್ದೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು: ಆಯುಕ್ತ ಬದ್ರುದ್ದೀನ್, ಹರೀಶ್ ಕುಮಾರ್

ಚಾಮರಾಜನಗರ, ನವೆಂಬರ್ 15 :- ಉನ್ನತ ಅಧಿಕಾರಸ್ಥರಿಂದ ಹಿಡಿದು ಗ್ರಾಮ ಪಂಚಾಯಿತಿ ವರೆಗಿನ ಎಲ್ಲ ಸಾರ್ವಜನಿಕ ಪ್ರಾಧಿಕಾರಗಳು ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಬರಲಿವೆ. ಹೀಗಾಗಿ ಮಾಹಿತಿ ಹಕ್ಕಿನಡಿ ಕೇಳಲಾಗುವ ಯಾವುದೇ ಅರ್ಜಿಯನ್ನು ನಿರ್ಲಕ್ಷ್ಯ ಮಾಡದೆ ಕಾಲಮಿತಿಯೊಳಗೆ ವಿಲೇವಾರಿ ಮಾಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಮಾಹಿತಿ ಆಯುಕ್ತರಾದ ಡಾ. ಹರೀಶ್ ಕುಮಾರ್ ಹಾಗೂ ಕೆ. ಬದ್ರುದ್ದೀನ್ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ…

Read More

ರಾಷ್ಟ್ರಪತಿ ರವರಿಂದ ಆರನೇ ʻರಾಷ್ಟ್ರೀಯ ಜಲ ಪ್ರಶಸ್ತಿʼ ಮತ್ತು ʻಜಲ ಸಂಚಾಯ್-ಜನ ಭಾಗೀದಾರಿ ಪ್ರಶಸ್ತಿʼಪ್ರದಾನ – ಸಮರ್ಥ ನೀರಿನ ಬಳಕೆಗೆ ಜನಸಹಭಾಗಿತ್ವದ ಕರೆ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ನವೆಂಬರ್ 18, 2025) ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಆರನೇ ‘ರಾಷ್ಟ್ರೀಯ ಜಲ ಪ್ರಶಸ್ತಿ’ಗಳು ಮತ್ತು ‘ಜಲ ಸಂಚಾಯ್-ಜನ ಭಾಗೀದಾರಿ ಪ್ರಶಸ್ತಿ’ಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿ ಅವರು, ಮಾನವ ನಾಗರಿಕತೆಯ ಕಥೆಯು ನದಿ ಕಣಿವೆಗಳಲ್ಲಿ, ಸಮುದ್ರ ತೀರಗಳಲ್ಲಿ ಮತ್ತು ವಿವಿಧ ಜಲಮೂಲಗಳ ಸುತ್ತಲೂ ನೆಲೆಸಿದ ಗುಂಪುಗಳ ಕಥೆಯೇ ಆಗಿದೆ ಎಂದು ಹೇಳಿದರು. ನಮ್ಮ ಸಂಪ್ರದಾಯದಲ್ಲಿ, ನದಿಗಳು, ಸರೋವರಗಳು ಮತ್ತು ಇತರ ನೀರಿನ ಮೂಲಗಳನ್ನು ಪೂಜಿಸಲಾಗುತ್ತದೆ….

Read More

ಮಂಡ್ಯ ತಾಲ್ಲೂಕಿನಲ್ಲಿ ಶಾಲಾ ಫಲಿತಾಂಶ ಸುಧಾರಣೆ, ಆರೋಗ್ಯ-ಕೃಷಿ-ಪ್ರಾಣಿ ಸಂಪನ್ಮೂಲ ಅಭಿವೃದ್ಧಿಗೆ ಶಾಸಕ ಪಿ. ರವಿಕುಮಾರ್ ಸೂಚನೆ

ಮಂಡ್ಯ.ನ.18:- ಮಂಡ್ಯ ತಾಲ್ಲೂಕು ವ್ಯಾಪ್ತಿಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ವೃದ್ಧಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ ರವಿಕುಮಾರ್ ಅವರು ಹೇಳಿದರು. ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಂಡ್ಯ ತಾಲ್ಲೂಕು ವ್ಯಾಪ್ತಿಯ ಕೆಲವು ಆಸ್ಪತ್ರೆಗಳಲ್ಲಿ ವೈದ್ಯರು ರಾತ್ರಿ ವೇಳೆಯಲ್ಲಿ ಇರುವುದಿಲ್ಲವೆಂದು ದೂರು ಕೇಳಿ ಬರುತ್ತಿವೆ ಎಲ್ಲಾ ಆಸ್ಪತ್ರೆಗಳಲ್ಲೂ…

Read More

ದೆಹಲಿಯ ಕೆಂಪು ಕೋಟೆ ಸ್ಫೋಟ: ಶೂನಲ್ಲಿ ಸ್ಫೋಟಕ ಸಿಕ್ಕಿಸಿಕೊಂಡ ಉಗ್ರನ ಭಯಾನಕ ಪ್ಲಾನ್ ಬಹಿರಂಗ

ನವದೆಹಲಿ, ನ.18.ರಾಜಧಾನಿ ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟಕ್ಕೆ ಆತ್ಮಾಹುತಿ ದಾಳಿಕೋರ ಡಾ.ಉಮರ್ ಮೊಹಮ್ಮದ್ ತಾನು ಧರಿಸಿದ್ದ ಶೂನಲ್ಲಿ ಸ್ಫೋಟಕ ಸಿಕ್ಕಿಸಿಕೊಂಡಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಫಾರೆನ್ಸಿಕ್ ತಜ್ಞರು ತನಿಖೆಯ ವೇಳೆ, ಮೆಟಲ್ ಟ್ರಿಗ್ಗರ್ ಒಂದನ್ನು ಶೂನಲ್ಲಿ ಜೋಡಿಸಿದ್ದನ್ನು ಸ್ಫೋಟದ ಸ್ಥಳದಿಂದ ಪತ್ತೆ ಮಾಡಿದ್ದು, ಇದರೊಂದಿಗೆ ಆತ್ಮಾಹುತಿ ದಾಳಿ ಎನ್ನುವುದಕ್ಕೆ ಮಹತ್ವದ ಸಾಕ್ಷ್ಯ ಕಲೆಹಾಕಿದ್ದಾರೆ. ಟಿಎಟಿಪಿ (triacetone triperoxide) ಎನ್ನುವ ರೀತಿಯ ಸ್ಫೋಟಕ ಬಳಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಇದೇ ಮಾದರಿಯನ್ನು ಜಗತ್ತಿನ ಹಲವೆಡೆ ನಡೆದಿರುವ…

Read More

ದೆಹಲಿಯಲ್ಲಿ ಸಿಎಂ–ಡಿಸಿಎಂ ರಹಸ್ಯ ಮಾತುಕತೆ: ಸಚಿವ ಸಂಪುಟ ಪುನರ್​ ರಚನೆ ಚುರುಕು

ಕಳೆದ ಹಲವು ದಿನಗಳಿಂದ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕಾಗಿವೆ. ಸಚಿವ ಸಂಪುಟ ಪುನರ್​​ರಚನೆಯಾಗಲಿದೆ ಎಂಬ ಚರ್ಚೆಯ ನಡುವೆ ಒಬ್ಬರಾದ ಮೇಲೆ ಒಬ್ಬರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ‌.ಶಿವಕುಮಾರ್ ಅವರುಗಳು ದೆಹಲಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ರಹಸ್ಯ ಮಾತುಕತೆ ನಡೆಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ನಿವಾಸ ಕಳೆದ ಎರಡು ದಿನಗಳಿಂದ ರಾಜ್ಯದ ವಿಚಾರಕ್ಕೆ ಹೆಚ್ಚು ಸದ್ದು ಮಾಡಿದೆ. ಯಾಕಂದರೆ, ಮೊನ್ನೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಹೋದರ ಡಿಕೆ…

Read More

ಬೆಂಗಳೂರಿನಲ್ಲಿ ಹಾಡಹಗಲೇ ಎಟಿಎಂ ವಾಹನ ಹೈಜಾಕ್, 7.11 ಕೋಟಿ ರೂ. ದರೋಡೆ!

ಬೆಂಗಳೂರು, ನ.19 : ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ನಡೆದಿದೆ. ಇಂದು (ನವೆಂಬರ್ 19) ಮಧ್ಯಾಹ್ನ ಇನ್ನೋವಾ ಕಾರಿನಲ್ಲಿ ಬಂದ ಗ್ಯಾಂಗ್, ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಪರಾರಿಯಾಗಿದೆ. ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್‌ ಬಳಿ ತಡೆದು ಹಣ ದೋಚಿಕೊಂಡು ಎಸ್ಕೇಪ್ ಆಗಿದೆ. ಸೌತ್ ಎಂಡ್ ಸರ್ಕಲ್ ಬಳಿಯ…

Read More

ಶಬರಿಮಲೆ ಯಾತ್ರಿಕರೇ ಎಚ್ಚರವಹಿಸಿ ಮಿದುಳು ತಿನ್ನುವ ಅಮೀಬಾ (ನೇಗ್ಲೇ ರಿಯಾ ಫೌಲೇರಿ) ಕುರಿತು ಆರೋಗ್ಯ ಸಚಿವಾಲಯದಿಂದ ಸುರಕ್ಷತಾ ಸಲಹಾ ಮಾರ್ಗಸೂಚಿ

ಮಂಡ್ಯ.ನ.19.(ಕರ್ನಾಟಕ ವಾರ್ತೆ):-ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ  (Naegleria fowleri) ಇಂದ ಉಂಟಾಗುವ ಅಮೀಬಿಕ್ಮೆ ನಿಂಗೊಎನ್ಸೆಫಲೈಟಿಸ್  (Amoebic meningoencephalitis)  ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ. 1. ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು…

Read More

ಚಾಮರಾಜನಗರ ಮೂಢನಂಬಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು: “ನನ್ನ ಅಧಿಕಾರ ಭದ್ರ”

ಚಾಮರಾಜನಗರ, ನವೆಂಬರ್ 20: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ…

Read More
error: Content is protected !!