ದಸರಾ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಮೈಸೂರು,ಸೆ.22:- ಮೈಸೂರು ದಸರಾ ಮಹೋತ್ಸವದಲ್ಲಿ ಪ್ರವಾಸಿಗರಿಗೆ ಅತ್ಯಂತ ಆಕರ್ಷಣೀಯವಾದ ದಸರಾ ಫಲಪುಷ್ಪ ಪ್ರದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ನಗರದ ಕುಪ್ಪಣ್ಣ ಪಾರ್ಕ್ ನಲ್ಲಿ ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಆಯೋಜಿಸಲಾಗಿರುವ ದಸರಾ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಸರ್ಕಾರದ ಸಚಿವರೊಂದಿಗೆ ಕೆಲ ಕಾಲ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಗಾಂಧಿ ಮಂಟಪ: ಈ ಬಾರಿ ಜಂಬೂಸವಾರಿ ದಿನವೇ ಗಾಂಧಿ ಜಯಂತಿ ಇರುವ ಕಾರಣ ಮಹಾತ್ಮ ಗಾಂಧಿಯವರ…

