ಸೆ. 17 ರಿಂದ ಅ. 2 ರವರೆಗೆ ಗ್ರಾಮೀಣ ಸಮುದಾಯದಲ್ಲಿ ಸ್ವಚ್ಛೋತ್ಸವ: ಕೆ.ಆರ್.ನಂದಿನಿ
ಮಂಡ್ಯ.ಸೆ.16:– ಜಿಲ್ಲೆಯ ಎಲ್ಲಾ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಅಂಗವಾಗಿ ಸ್ವಚ್ಛತಾ ಹೀ ಸೇವಾ ಅಥವಾ ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಜನಾಂದೋಲನವನ್ನು ಹಮ್ಮಿಕೊಂಡಿದ್ದು, ಈ ಪ್ರಯುಕ್ತ ಸ್ವಚ್ಛತಾ ಹೀ ಸೇವಾ 2025 ಅಭಿಯಾನವನ್ನು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ *”ಸ್ವಚೋತ್ಸವ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಪ್ರತಿ ವರ್ಷ ಅಕ್ಟೋಬರ್ 2ರಂದು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿದ್ದು, ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು…

