“ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ “
ಮೈಸೂರು, ಸೆಪ್ಟೆಂಬರ್ 15: ಮೈಸೂರಿನ ದಸರಾ ಉದ್ಘಾಟನೆಯಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ನಾಯಕ ಪ್ರತಾಪ್ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ವಿಭಾಗೀಯ ಪೀಠ, “ದಸರಾ ಉದ್ಘಾಟನೆ ಸಂಬಂಧ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ….

