ರೇಣುಕಾಸ್ವಾಮಿ ಕೊಲೆ ಕೇಸ್: ಬಂಧಿತ ಪವಿತ್ರಾಗೌಡ ಜಾಮೀನು ಅರ್ಜಿ ವಜಾ!
ಬೆಂಗಳೂರು, ಸೆಪ್ಟೆಂಬರ್ 2: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ಪವಿತ್ರಾಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ 7 ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾಗೌಡ ಜಾಮೀನು ಕೋರಿ ಅರ್ಜಿ ಹಾಕಿದ್ದರು. ಆದರೆ ಪವಿತ್ರಾಗೌಡ ಜಾಮೀನು ಅರ್ಜಿ ವಜಾ ಆಗಿದೆ….

