ಶಾಸಕ ಸತೀಶ್ ಸೈಲ್ ಮನೆಯಲ್ಲಿ ಇಡಿ ರೇಡ್: ಕೋಟ್ಯಂತರ ರೂ. ನಗದು, ಕೆಜಿಗಟ್ಟಲೆ ಚಿನ್ನ ಜಪ್ತಿ!
ಕಾರವಾರ, ಆಗಸ್ಟ್ 15: ಉತ್ತರಕನ್ನಡ ಜಿಲ್ಲೆಯ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದಲ್ಲಿ ಕೇಂದ್ರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ 2 ದಿನಗಳಿಂದ ಶೋಧ ಕಾರ್ಯ ನಡೆಸಿದ್ದರು. ಈ ಶೋಧದ ವೇಳೆ ಇಡಿ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ, ಕೆಜಿಗಟ್ಟಲೆ ಚಿನ್ನ ಪತ್ತೆಹಚ್ಚಿದ್ದಾರೆ. ಶಾಸಕ ಸತೀಶ್ ಸೈಲ್ ಮನೆ ಮತ್ತು ಬ್ಯಾಂಕ್ ಖಾತೆಯಲ್ಲಿದ್ದ 1.68 ಕೋಟಿ ರೂಪಾಯಿ ನಗದು ಮತ್ತು ಅಂದಾಜು 6,20,45,319 ರೂ. ಮೌಲ್ಯದ 6.75 ಕೆಜಿ ಚಿನ್ನವನ್ನು…

