ವೋಟಿಗಾಗಿ ನೋಟು; ಸಿದ್ದರಾಮಯ್ಯ,ಡಿ.ಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು
ಬೆಂಗಳೂರು, ಆ.13: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವೋಟ್ಗಾಗಿ ನೋಟು ಹಂಚಿಕೆ ಮಾಡಲಾಗಿದೆ ಎಂಬ ಶಾಸಕ ಶಿವಲಿಂಗೇಗೌಡ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. “2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ನ ಅಭ್ಯರ್ಥಿಯಾಗಿದ್ದ ಸಂಸದ ಶ್ರೇಯಸ್ ಎಂ. ಪಟೇಲ್ ಪರವಾಗಿ ಜಿಲ್ಲೆಯಲ್ಲಿ ಹಣ ಹಂಚಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ…

