Headlines

newsfilemagazine

ಪ್ರಧಾನಿ ಮೋದಿಯವರ ನಾಳಿನ‌ ಬೆಂಗಳೂರು ಕಾರ್ಯಕ್ರಮಗಳ ವೇಳಾಪಟ್ಟಿ..

ಬೆಂಗಳೂರು, ಆಗಸ್ಟ್ 9: ಮೆಟ್ರೋದ ಹಳದಿ ಮಾರ್ಗ​ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್​ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಕುರಿತು ವೇಳಾಪಟ್ಟಿ ಹಂಚಿಕೊಂಡಿರುವ ಸಿಎಂ ಕಚೇರಿ, ಮೋದಿ 4 ಗಂಟೆಗಳ ಕಾಲ ಇರಲಿದ್ದು, ಈ ವೇಳೆ ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಹೆಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ, ಕೆಎಸ್​ಆರ್​ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಲಿದ್ದು, ಅಲ್ಲಿ ಬೆಂಗಳೂರು-…

Read More

ವಿಷ್ಣುವರ್ಧನ್ ಸಮಾಧಿ ನೆಲಸಮ: ‘ಎಲ್ಲದಕ್ಕೂ ಅವನೇ ಕಾರಣ’ ಎಂದ ಗೀತಾ ಬಾಲಕೃಷ್ಣ

ಬಾಲಣ್ಣ ಅವರಿಗೆ ಸೇರಿದ್ದ ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ನೆಲಸಮ ಮಾಡಲಾಗಿದೆ. ಇದು ಸಹಜವಾಗಿಯೇ ವಿಷ್ಣುವರ್ಧನ್ ಅಭಿಮಾನಿಗಳಿಗೆ ನೋವುಂಟು ಮಾಡಿದೆ. ಹಲವು ವರ್ಷಗಳಿಂದಲೂ ಅಭಿಮಾನ್ ಸ್ಟುಡಿಯೋನಲ್ಲಿ ವಿಷ್ಣುವರ್ಧನ್ ಸಮಾಧಿಯನ್ನು ಉಳಿಸಿಕೊಂಡು ಅಲ್ಲೊಂದು ಸ್ಮಾರಕ ನಿರ್ಮಾಣ ಮಾಡಲು ಅಭಿಮಾನಿಗಳು ಹೋರಾಡುತ್ತಲೇ ಇದ್ದರು. ಆದರೆ ಈಗ ಅಭಿಮಾನ್ ಸ್ಟುಡಿಯೋನಲ್ಲಿ ಇದ್ದ ಒಂದು ಕುರುಹನ್ನು ಒಡೆದು ಹಾಕಲಾಗಿದೆ. ಇದೀಗ ಈ ಘಟನೆ ಕುರಿತು ಬಾಲಣ್ಣ ಅವರ ಕುಟುಂಬದ ಸದಸ್ಯರೊಬ್ಬರು ಮಾತನಾಡಿದ್ದು, ‘ಎಲ್ಲದಕ್ಕೂ ಅವನೇ ಕಾರಣ’ ಎಂದು ದೂಷಿಸಿದ್ದಾರೆ. ಬಾಲಕೃಷ್ಣ ಅವರ…

Read More

ನಾಳೆ ಪ್ರಧಾನಿ ಆಗಮಿಸುವ ಹಿನ್ನೆಲೆ: ಬೆಂಗಳೂರಿನ ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಗಳೂರು, ಆಗಸ್ಟ್ 9: ವಂದೇ ಭಾರತ್‌ ರೈಲು ಹಾಗೂ ಮೆಟ್ರೊ ಮಾರ್ಗ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದ್ದು, ಕೆಲ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರ ನಿರ್ಬಂಧಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ 12.30ರವರೆಗೆ ಮಾರೇನಹಳ್ಳಿ ಮುಖ್ಯ ರಸ್ತೆಯ ರಾಜಲಕ್ಷ್ಮಿ ಜಂಕ್ಷನ್‌ ನಿಂದ ಮಾರೇನಹಳ್ಳಿ 18ನೇ ಮುಖ್ಯ ರಸ್ತೆ ಹಾಗೂ ಮಾರೇನಹಳ್ಳಿ ಈಸ್ಟ್‌ ಎಂಡ್‌ ಮುಖ್ಯ ರಸ್ತೆ ಜಂಕ್ಷನ್‌ನಿಂದ ಆರವಿಂದ ಜಂಕ್ಷನ್‌…

Read More

ಭಾರತದ ವ್ಯಾಪಾರದ ಮೇಲೆ ಶೇ.50ರಷ್ಟು ಸುಂಕ ವಿಧಿಸಿದ ಅಮೆರಿಕಾ!

ವಾಷಿಂಗ್ಟನ್, ಆಗಸ್ಟ್ 6: ತನ್ನ ಕಡು ವೈರಿ ರಷ್ಯಾದಿಂದ ತೈಲ ಖರೀದಿಸಿದ್ದೇವೆ ಎಂಬ ಕಾರಣಕ್ಕೆ ಭಾರತದ ವಿರುದ್ಧ ಕಿಡಿ ಕಾರುತ್ತಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿನ್ನೆ (ಮಂಗಳವಾರ) ಮುಂದಿನ 24 ಗಂಟೆಯೊಳಗೆ ಭಾರತದ ಮೇಲಿನ ಸುಂಕವನ್ನು ಗಣನೀಯವಾಗಿ ಹೆಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಕೊನೆಗೂ ತಾವು ಹೇಳಿದಂತೆಯೇ ಮಾಡಿರುವ ಟ್ರಂಪ್ ಇಂದು ಬುಧವಾರ ಭಾರತದ ಮೇಲೆ ಹೆಚ್ಚುವರಿಯಾಗಿ ಶೇ.25ರಷ್ಟು ಸುಂಕ ವಿಧಿಸಿದ್ದಾರೆ. ಈ ಮೂಲಕ ಭಾರತದ ಮೇಲೆ ಅಮೆರಿಕ ಹೇರಿರುವ ವ್ಯಾಪಾರ ಸುಂಕ ಶೇ.50ರಷ್ಟಾಗಿದೆ! ಆಗಸ್ಟ್…

Read More

ಧರ್ಮಸ್ಥಳ ಬಗ್ಗೆ ಅಪಪ್ರಚಾರ ಆರೋಪ: ಯೂಟ್ಯೂಬರ್ಸ್ ಗಳ ಮೇಲೆ ಹಲ್ಲೆ

ಮಂಗಳೂರು, ಆಗಸ್ಟ್ 6: ಸಾಲು ಸಾಲು ಅಪಪ್ರಚಾರ, ಧರ್ಮಸ್ಥಳದ ಬಗ್ಗೆ ಸುಳ್ಳು ಸುದ್ದಿಗಳನ್ನೇ ಬಿತ್ತರ ಮಾಡುತ್ತಿದ್ದ 30ಕ್ಕೂ ಅಧಿಕ ಯೂಟ್ಯೂಬರ್‌ಗಳ ಮೇಲೆ ಧರ್ಮಸ್ಥಳದ ಭಕ್ತರು ಶ್ರೀಕ್ಷೇತ್ರದಲ್ಲಿಯೇ ಧರ್ಮದೇಟು ನೀಡಿ ಓಡಿಸಿದ್ದಾರೆ. ಈ ಗಲಭೆಯಲ್ಲಿ ಗಾಯಗೊಂಡ ಕೆಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಉಜಿರೆಯಲ್ಲಿ ಸ್ಥಳೀಯ ಸುವರ್ಣನ್ಯೂಸ್‌ ಚಾನೆಲ್ ವರದಿಗಾರನ ಮೇಲೆ ಮಹೇಶ್‌ ಶೆಟ್ಟಿ ತಿಮರೋಡಿ ಅವರ ಗ್ಯಾಂಗ್‌ ಹಲ್ಲೆ ಮಾಡಿದ್ದಾರೆ. ಈ ನಡುವೆ, ಕ್ಷೇತ್ರದ ಬಗ್ಗೆ ಅವಹೇಳನ ಮಾಡುತ್ತಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ, ಧರ್ಮಸ್ಥಳದ…

Read More

ತಮ್ಮ ಜಾಮೀನು ರದ್ದುಗೊಳಿಸಬಾರದೆಂದು ಸುಪ್ರೀಂಕೋರ್ಟಿಗೆ ಲಿಖಿತ ಕಾರಣಗಳನ್ನು ನೀಡಿದ ದರ್ಶನ್

ಸರ್ಕಾರವು ಸಹ ಲಿಖಿತ ಕಾರಣಗಳನ್ನು ಸುಪ್ರೀಂಕೋರ್ಟ್​​​ಗೆ ನೀಡಿದ್ದು, ದರ್ಶನ್ ಹಾಗೂ ಪವಿತ್ರಾ ಅವರುಗಳು ರೇಣುಕಾ ಸ್ವಾಮಿಯ ಅಪಹರಣ ಮತ್ತು ಕೊಲೆಯಲ್ಲಿ ಸಕ್ರಿಯರಾಗಿ ಭಾಗಿ ಆಗಿದ್ದರು ಎಂದು ಆರೋಪಿಸಿದೆ. ಇದೀಗ ದರ್ಶನ್ ಪರ ವಕೀಲರು ನೀಡಿರುವ ಲಿಖಿತ ಕಾರಣಗಳಲ್ಲಿ, ದರ್ಶನ್ ಅವರ ಬಂಧನದ ಪ್ರಕ್ರಿಯೆ ಬಗ್ಗೆ ಪ್ರಶ್ನೆ ಮಾಡಲಾಗಿದೆ. ದರ್ಶನ್ ರನ್ನು ಮೈಸೂರಿನಲ್ಲಿ ಬಂಧಿಸಲಾಗಿತ್ತು, ಬೆಂಗಳೂರಿನಲ್ಲಿ FIR ದಾಖಲು, ಬಂಧನಕ್ಕೆ ಕಾರಣವನ್ನು ಸಂಜೆ 6:30 ರವರೆಗೂ ಲಿಖಿತವಾಗಿ ನೀಡಿರುವುದಿಲ್ಲ. ಬಂಧನಕ್ಕೆ ಕಾರಣಗಳನ್ನು ನೀಡದೆ ಇರುವುದು ಕಾನೂನು ಉಲ್ಲಂಘನೆ ಎಂದಿದ್ದಾರೆ….

Read More

ಮುಷ್ಕರ ನಡೆಸಿದ ಸಾರಿಗೆ ಸಂಘಟನೆಗೆ ಹೈಕೋರ್ಟ್ ತರಾಟೆ

ಬೆಂಗಳೂರು, ಆಗಸ್ಟ್ 5: ಕರ್ನಾಟಕ ಹೈಕೋರ್ಟ್ ಖಡಕ್​ ಎಚ್ಚರಿಕೆ ನೀಡಿದ ಬೆನ್ನಲ್ಲೇ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್​ ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿದ್ದೇವೆ ಎಂದು ಘೋಷಿಸಿದ್ದಾರೆ. ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್​ ಸೂಚನೆ ನೀಡಿದ ನಂತರವೂ ಸಾರಿಗೆ ನೌಕರರು ಮಂಗಳವಾರ ಮುಷ್ಕರ ನಡೆಸಿದರು. ಇದರಿಂದ ಗರಂ ಆದ ಹೈಕೋರ್ಟ್​, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯನ್ನು ತರಾಟೆಗೆ ತೆಗೆದುಕೊಂಡಿತು. ಮುಷ್ಕರ ನಿಲ್ಲಿಸದಿದ್ದರೆ ನ್ಯಾಯಾಂಗ ನಿಂದನೆ…

Read More

ಕೋರ್ಟ್ ಆದೇಶದಂತೆ ಸಾರಿಗೆ ಮುಷ್ಕರ ಮುಂದೂಡಿದ್ದೇವೆ: ಅನಂತ ಸುಬ್ಬಾರಾವ್

ಬೆಂಗಳೂರು, ಆಗಸ್ಟ್ 5: ಕೆಎಸ್​ಆರ್​ಟಿಸಿ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಹೆಚ್.ವಿ ಅನಂತ್ ಸುಬ್ಬಾರಾವ್ ಸಾರಿಗೆ ನೌಕರರ ಮುಷ್ಕರವನ್ನು ಸ್ಥಗಿತಗೊಳಿಸಲಾಗಿದೆ, ನೌಕರರು ತಮ್ಮ ಕೆಲಸಗಳಿಗೆ ರಿಪೋರ್ಟ್ ಮಾಡಿಕೊಳ್ಳಬೇಕೆಂದು ಹೇಳಿದರು. ಸಾರಿಗೆ ಮುಷ್ಕರ ಹಿಂಪಡೆದ ಬಗ್ಗೆ ಅನಂತ ಸುಬ್ಬರಾವ್ಅವರು ಹೇಳಿದ್ದಿಷ್ಟು:ನೌಕರರಲ್ಲಿ ಯಾವ ಗೊಂದಲವೂ ಇಲ್ಲ, ಮುಷ್ಕರಕ್ಕೆ ಕರೆ ಕೊಟ್ಟವರು ನಾವು ಮತ್ತು ನಾವೇ ಕೆಲಸಕ್ಕೆ ಹಾಜರಾಗುವಂತೆ ಹೇಳುತ್ತಿದ್ದೇವೆ ಎಂದು ಹೇಳಿದ ಅವರು, ಸರ್ಕಾರ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಮ್ಮನ್ನು ಮಾತುಕತೆಗೆ ಕರೆದು ಇತರ ಬೇಡಿಕೆಗಳ ಬಗ್ಗೆ ಚರ್ಚೆ…

Read More

ಕಾಂಗ್ರೆಸ್‌ ಮುಖಂಡನ ವಿರುದ್ಧ ಕ್ರಮಕ್ಕೆ ಒಕ್ಕಲಿಗರ ಆಗ್ರಹ

ಮಂಡ್ಯ: ಒಕ್ಕಲಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ಮುಖಂಡ ಸೀತಾರಾಮ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಮಂಡ್ಯ ಜಿಲ್ಲಾ ವಿವಿಧ ಒಕ್ಕಲಿಗರ ಸಮುದಾಯದ ಮುಖಂಡ ಹಾಗೂ ರಾಜ್ಯ ವಕೀಲರ ಪರಿಷತ್ ಮಾಜಿ ಅಧ್ಯಕ್ಷ ವಿಶಾಲರಘು ಖಂಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗ ಸಮಾಜದ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದ ಸೀತಾರಾಮ್ ವಿರುದ್ಧ ಈಗಾಗಲೇ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಅಡಿಯಲ್ಲಿ ದೂರು ದಾಖಲಾಗಿದೆ. ಕಾಂಗ್ರೆಸ್ ಪಕ್ಷದ ಮುಖಂಡ ಸೀತಾರಾಮ್ ಒಕ್ಕಲಿಗರ ಸಮಾಜವನ್ನು ಬಾಯಿಗೆ ಬಂದಂತೆ…

Read More

ಸಾರಿಗೆ ಬಸ್ ನಿಲ್ದಾಣಗಳಲ್ಲಿ ‌ಖಾಸಗಿ ಬಸ್ಸುಗಳ ತುರ್ತು ಸೇವೆ!

ಸಾರಿಗೆ ನಿಗಮಗಳ ಮುಷ್ಕರದ ಹಿನ್ನೆಲೆಯಲ್ಲಿ ಹಲವು ಸರ್ಕಾರಿ ನಿಲ್ದಾಣಗಳಿಗೆ ಖಾಸಗಿ ಬಸ್‌‍ಗಳು ಪ್ರವೇಶಿಸಿದ್ದು, ವಿಶೇಷವಾಗಿತ್ತು. ಪ್ರವಾಸೋಧ್ಯಮ ಹಾಗೂ ಖಾಸಗಿಯಾಗಿ ರಹದಾರಿ ಪಡೆದು ಸಂಚರಿಸುತ್ತಿದ್ದ ಬಸ್‌‍ಗಳನ್ನು ಇಂದು ಸಾರಿಗೆ ಇಲಾಖೆ ಅಧಿಕಾರಿಗಳೇ ನಿಗಮಗಳ ಬಸ್‌‍ನಿಲ್ದಾಣದ ಒಳಗೆ ಬರಲು ಆಹ್ವಾನಿಸಿದರು. ಕಲಬುರಗಿ ಸೇರಿದಂತೆ ಹಲವು ಬಸ್‌‍ನಿಲ್ದಾಣಗಳಲ್ಲಿ ಖಾಸಗಿ ಬಸ್‌‍ಗಳ ದರ್ಬಾರು ಕಂಡು ಬಂದಿತು. ಖಾಸಗಿ ಬಸ್‌‍ಗಳು, ಮಹಿಳೆಯರು ಹಾಗೂ ಪುರುಷ ಪ್ರಯಾಣಿಕರಿಂದಲೂ ದುಪ್ಪಟ್ಟು ಪ್ರಯಾಣ ದರ ವಸೂಲಿ ಮಾಡಿದ್ದವು. ಸರ್ಕಾರ ಹಾಗೂ ಜಿಲ್ಲಾಡಳಿತಗಳ ಎಚ್ಚರಿಕೆಯ ನಡುವೆಯೂ ಖಾಸಗಿ ಬಸ್‌‍ಗಳಲ್ಲಿ ನಾಲ್ಕೈದು…

Read More
error: Content is protected !!