ಮತ ಕಳುವು ಆರೋಪ: ಪ್ರತಿಭಟನೆ ನಡೆಸಿದ ಇಂಡಿಯಾ ಮೈತ್ರಿಕೂಟದ ಸಂಸದರು ಅರೆಸ್ಟ್
ನವದೆಹಲಿ, ಆಗಸ್ಟ್11: ಮತಕಳುವಿನ ಆರೋಪ ಮಾಡಿರುವ ಪ್ರತಿಪಕ್ಷಗಳ ಒಕ್ಕೂಟದ ಸಂಸದರು ಲೋಕಸಭೆಯ ವಿ.ಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸತ್ ಭವನದಿಂದ ಚುನಾವಣಾ ಆಯೋಗದ ಮುಖ್ಯ ಕಚೇರಿವರೆಗೆ ನಡೆಸುತ್ತಿರುವ ಪ್ರತಿಭಟನಾ ಮೆರವಣಿಗೆಯನ್ನು ದೆಹಲಿ ಪೊಲೀಸರು ತಡೆದಿದ್ದಾರೆ. ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಹಾಗೂ ಮತ ಕಳುವಿನ ಆರೋಪದ ಹಿನ್ನೆಲೆ ಈ ಪ್ರತಿಭಟನೆ ನಡೆದಿದೆ. ಸಂಸತ್ ಭವನದಿಂದ ಇಂದು ಸೋಮವಾರ ಬೆಳಗ್ಗೆ 11.30ಕ್ಕೆ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಇಲ್ಲಿಂದ ಒಂದು ಕಿ.ಮೀ…

