ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಮೃತ ಯುವತಿಯ ಮರಣೋತ್ತರ ಪರೀಕ್ಷೆ ವೇಳೆ ಕಿವಿಯೋಲೆ ಕಳವು!
ಬೆಂಗಳೂರು, ಜುಲೈ 24: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮೃತಪಟ್ಟಿದ್ದ ದಿವ್ಯಾಂಶಿಯ ಚಿನ್ನಾಭರಣ ಕಳ್ಳತನವಾಗಿರುವ ಆರೋಪ ಕೇಳಿಬಂದಿದೆ. ಶವಾಗಾರದೊಳಗೆ ಮೃತದೇಹ ಕೊಂಡೊಯ್ಯುವಾಗ ಮಗಳ ಕಿವಿಯೋಲೆ, ಚಿನ್ನದ ಸರ ಇತ್ತು. ಆದ್ರೆ, ಕುಟುಂಬಸ್ಥರಿಗೆ ಹಸ್ತಾಂತರಿಸುವಾಗ ಆಭರಣ ಕಾಣೆಯಾಗಿತ್ತು ಎಂದು ದಿವ್ಯಾಂಶಿ ತಾಯಿ ಅಶ್ವಿನಿ ಆರೋಪಿಸಿ ಬೌರಿಂಗ್ ಆಸ್ಪತ್ರೆ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶವಾಗಾರದೊಳಗೆ ಮೃತದೇಹ ಕೊಂಡೊಯ್ಯುವಾಗ ಆಭರಣ ಇತ್ತು. ಕುಟುಂಬಸ್ಥರಿಗೆ ಹಸ್ತಾಂತರಿಸುವಾಗ ಆಭರಣ…

