ಹಿರಿಯೂರು ವೈದ್ಯಾಧಿಕಾರಿ ಮನೆ ಮೇಲೆ ಲೋಕಾ ದಾಳಿ: ರಾಶಿಗಟ್ಟಲೆ ನಗದು, ಚಿನ್ನ ಪತ್ತೆ!
ಚಿತ್ರದುರ್ಗ, ಜುಲೈ 29: ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ (ಜುಲೈ 29) ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಹಾಗೂ ಇತರ ಆಸ್ತಿಗಳ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದರು. ಲೋಕಾಯುಕ್ತ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ವೈದ್ಯಾಧಿಕಾರಿ ಡಾ.ವೆಂಕಟೇಶ್ಗೆ ಸೇರಿದ ಮನೆ, ಕ್ಲಿನಿಕ್ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಹಿರಿಯೂರು ತಾಲೂಕಿನ ಆದಿವಾಲ ಗ್ರಾಮ ಮೂಲದ ಡಾ.ವೆಂಕಟೇಶ್ ಗ್ರಾಮದಲ್ಲಿ ಒಂದು…

