ಬೆಂಗಳೂರಿನ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ!
ಬೆಂಗಳೂರು, ಜುಲೈ 22: ನಗರದ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ನಗರದ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಗುಂಜೂರು ಮುಖ್ಯರಸ್ತೆಯಲ್ಲಿರುವ ಖಾಸಗಿ ಶಾಲೆಗೆ ಬಾಂಬ್ ಇಟ್ಟಿರುವುದಾಗಿ ಇಂದು ಮಂಗಳವಾರ ಬೆಳಗ್ಗೆ ಇ-ಮೇಲ್ ಸಂದೇಶ ಬಂದಿದೆ. ಇ-ಮೇಲ್ ಪರಿಶೀಲಿಸುತ್ತಿದ್ದ ಸಿಬ್ಬಂದಿ ಈ ಸಂದೇಶ ಗಮನಿಸಿ ಗಾಬರಿಯಾಗಿ ಶಾಲಾ ಆಡಳಿತ ಮಂಡಳಿಗೆ ತಿಳಿಸಿದ್ದಾರೆ. ಶಾಲಾ ಆಡಳಿತ ಮಂಡಳಿ ತಕ್ಷಣ ಮಕ್ಕಳನ್ನು ಮನೆಗೆ ಕಳುಹಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ….

