ಸಣ್ಣ ವ್ಯಾಪಾರಿಗಳಿಗೆ GST ಗೊಂದಲಕ್ಕೆ ಕೇಂದ್ರವೇ ಹೊಣೆ: ಸಿಎಂ
ಬೆಂಗಳೂರು, ಜುಲೈ 20: ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ತೆರಿಗೆಯ ನೋಟಿಸ್ ನೀಡಿರುವ ಸಂಬಂಧ ಪಟ್ಟಂತೆ ರಾಜ್ಯಸರ್ಕಾರ ಯಾವುದೇ ಜವಾಬ್ದಾರಿ ಹೊಂದಿಲ್ಲ . ಕೇಂದ್ರಸರ್ಕಾರವೇ ಹೊಣೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ವರದಿಗಾರರೊಂದಿಗೆ ಮಾತನಾಡಿರುವ ಅವರು, ಜಿಎಸ್‌ಟಿ ಕಾಯ್ದೆ ಮಾಡಿರುವುದು ಕೇಂದ್ರ ಸರ್ಕಾರ. ಜಿಎಸ್‌ಟಿ ಕೌನ್ಸಿಲ್ ಕೂಡ ರಾಜ್ಯ ಸರ್ಕಾರದ ಅಧೀನದಲ್ಲಿ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರವೇ ಹೊಣೆಗಾರಿಕೆ ಹೊಂದಿದೆ ಎಂದರು. ರಾಜ್ಯಸರ್ಕಾರದಿಂದ ಸಣ್ಣ ವ್ಯಾಪಾರಿಗಳಿಗೆ ಅನುಕೂಲ ಮಾಡಲು ಯಾವುದಾದರೂ ಅವಕಾಶಗಳು ಇದ್ದರೆ ಅದರ ಬಗ್ಗೆ…

