ಧರ್ಮಸ್ಥಳ ಭಾಗದ ಅಸಹಜ ಸಾವು-ನಾಪತ್ತೆಯಾದವರ ಕೇಸ್ ಗಳನ್ನು ಎಸ್ಐಟಿಗೆ ವಹಿಸಿದ ರಾಜ್ಯಸರ್ಕಾರ
ಬೆಂಗಳೂರು, ಜುಲೈ 20: ಧರ್ಮಸ್ಥಳ ಭಾಗದಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು ಹಾಗೂ ಅಸ್ವಾಭಾವಿಕ ಸಾವು, ಕೊಲೆ, ಅತ್ಯಾಚಾರ ಪ್ರಕರಣಗಳನ್ನು ಡಿಜಿಪಿ ಮಟ್ಟದ ಹಿರಿಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖೆಗೊಳಪಡಿಸುವುದಾಗಿ ರಾಜ್ಯಸರ್ಕಾರ ತಿಳಿಸಿದೆ. ಗೃಹ ಇಲಾಖೆಯಿಂದ ಹೊರಡಿಸಲಾಗಿರುವ ಆದೇಶದ ಅನುಸಾರ ಬೆಂಗಳೂರು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಡಾ. ಪ್ರಣವ್ ಮೊಹಾಂತಿ ನೇತೃತ್ವದಲ್ಲಿ 4 ಐಪಿಎಸ್ ಅಧಿಕಾರಿಗಳ ಎಸ್‌ಐಟಿ ರಚಿಸಲಾಗಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯ…

