ಕಲಾಸಿಪಾಳ್ಯದಲ್ಲಿ ಬಾಂಬ್ ಸ್ಫೋಟಕ ಪತ್ತೆ ಹಿನ್ನೆಲೆ: ತನಿಖೆಗೆ 6 ತಂಡಗಳ ರಚನೆ
ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ವಿಚಾರವಾಗಿ ತನಿಖೆಗೆ ಕಲಾಸಿಪಾಳ್ಯ ಠಾಣೆ ಪೊಲೀಸರಿಂದ ಆರು ತಂಡಗಳ ರಚನೆ ಮಾಡಲಾಗಿದೆ. ಸಿಸಿಬಿ, ಇಂಟೆಲಿಜೆನ್ಸ್, ಎಟಿಸಿ ತಂಡದಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜಿಲೆಟಿನ್ ಕಡ್ಡಿ ಜೊತೆಗೆ ಡಿಟೋನೆಟರ್ಗಳು ಕೂಡ ಪತ್ತೆ ಆಗಿದ್ದವು. ಈ ಬಗ್ಗೆ ಕಲಾಸಿಪಾಳ್ಯ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದ ಸಮೀಪ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಫೋಟಕ ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದ್ದವು….

