ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ: ಹೈಕೋರ್ಟ್ ತೀರ್ಪು
ಬೆಂಗಳೂರು, ಜುಲೈ 16: ಅವ್ಯವಹಾರ ವಿಡಿಯೋ ಸಾಕ್ಷಿ ಮೂಲಕ ಸಾಬೀತಾದ ಬೆನ್ನಲ್ಲಿಯೇ ಬೆಂಗಳೂರಿನ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಕೊಂಡಿದೆ. ಆದ್ರೆ, ಇದನ್ನು ಪ್ರಶ್ನಿಸಿ ದೇಗುಲದ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ರಾಜ್ಯಸರ್ಕಾರದ ಈ ಕ್ರಮಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.ಗಾಳಿ ಆಂಜನೇಯ ದೇವಾಲಯದಲ್ಲಿ ಹಣ ದುರುಪಯೋಗದ ಆರೋಪವಿದೆ. ಹೀಗಾಗಿ ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪೆನ್ನಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ…

