ಶಕ್ತಿ ಯೋಜನೆಗೆ 12 ಸಾವಿರದ 800 ಕೋಟಿ ಅನುದಾನ: ಪಿ. ರವಿಕುಮಾರ್
ಮಂಡ್ಯ.ಜು.14:- ರಾಜ್ಯಾದ್ಯಂತ ಪಂಚ ಗ್ಯಾರಂಟಿಗಳು ಎರಡೂ ವರ್ಷಗಳನ್ನು ಪೂರೈಸಿದೆ. ಶಕ್ತಿ ಯೋಜನೆ ಒಂದಕ್ಕೆ 12 ಸಾವಿರದ 800 ಕೋಟಿ ಅನುದಾನವನ್ನು ನೀಡಲಾಗಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಅವರು ತಿಳಿಸಿದರು. ಇಂದು (ಜು.14) ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ದಿ ಕಾರ್ಯಕ್ರಮಗಳ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಶಕ್ತಿ ಯೋಜನೆ…

