ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ 6 ತಿಂಗಳ ಎಸ್ಮಾ ಜಾರಿ ಶಾಕ್!
ಬೆಂಗಳೂರು, ಜುಲೈ 18: ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಸರ್ಕಾರದ ಬಾಗಿಲು ಬಡಿದು ಸುಸ್ತಾದ ಕೆಎಸ್ಆರ್ಟಿಸಿ, ಬಿಎಂಆರ್ಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಸಿಬ್ಬಂದಿಗಳು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಆಗಸ್ಟ್ 5ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಇದೀಗ ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ ಶಾಕ್ ನೀಡಿದ್ದು, ಪ್ರತಿಭಟನೆ ನಡೆಸದಂತೆ ಕಾರ್ಮಿಕ ಇಲಾಖೆ ಎಸ್ಮಾ ಜಾರಿ ಮಾಡಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ 4 ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರಂದು ಬೆಳಿಗ್ಗೆ 6…

