ಹುಲಿಕೆರೆ: ಆಕಸ್ಮಿಕ ಬೆಂಕಿ, ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಪೀಠೋಪಕರಣಗಳು ಭಸ್ಮ!
ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಮನೆಯಲ್ಲಿದ್ದ ಪೀಠೋಪಕರಣಗಳು ಸುಟ್ಟು ಬಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕು ಹುಲಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ನಿನ್ನೆ ಬೆಳಗ್ಗೆ ಸುಮಾರು 9 ಗಂಟೆಯ ಸುಮಾರಿಗೆ ಹುಲಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ MNPM ಕಾಲೋನಿಯ ಶಿವಣ್ಣಚಾರ್ ರವರ ಮನೆಯಲ್ಲಿ ಸೌದೆ ಒಲೆಯಲ್ಲಿ ನೀರು ಕಾಯಿಸುತ್ತಿರುವಾಗ ಆಕಸ್ಮಿಕವಾಗಿ ಬೆಂಕಿಯು ಮನೆಯನ್ನು ಆವರಿಸಿ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಪೀಠೋಪಕರಣಗಳು ಸುಟ್ಟು ಬಸ್ಮಮಾಡಿದೆ ಹಾಗೂ ಮನೆಯ ಮೇಲ್ಚಾವಣಿಯು ಸಂಪೂರ್ಣ ಹಾನಿಯಾಗಿದೆ. ಬೆಂಕಿ ಕಂಡ ಸ್ಥಳೀಯರು ಬೆಂಕಿ…

