ಹಿಂದುಳಿದ ವರ್ಗಗಳ ರಾಷ್ಟ್ರೀಯ ವೋಟ್ ಬ್ಯಾಂಕ್ ಗಿಟ್ಟಿಸಲು ಸಿದ್ದರಾಮಯ್ಯಗೆ ಎಐಸಿಸಿಯ ಮಹತ್ವದ ಹುದ್ದೆ!
ಕರ್ನಾಟಕದ ಸಿಎಂ ಸಿದ್ದರಾಮಯ್ಯಗೆ ನಿನ್ನೆ ಎಐಸಿಸಿ ಮಹತ್ವದ ಜವಾಬ್ದಾರಿ ನೀಡಿದೆ. ಎಐಸಿಸಿಯ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಿದೆ. ಈ ಮೂಲಕ ಸಿದ್ದರಾಮಯ್ಯ ಇದೀಗ ರಾಷ್ಟ್ರ ರಾಜಕಾರಣದಲ್ಲೂ ಗುರುತಿಸಿಕೊಳ್ಳಲಿದ್ದಾರೆ. ಕಳೆದ ವಾರ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು. ಈ ವೇಳೆ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ’ ಅಸ್ತಿತ್ವಕ್ಕೆ ಬಂದಿದೆ. ಜುಲೈ 15ರಂದು ಬೆಂಗಳೂರಿನಲ್ಲಿ ಇದರ ಮೊದಲ ಸಭೆ ನಡೆಯಲಿದೆ. ದೇಶದಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು…

