ಮಾಜಿ ಸಭಾಪತಿ ಎನ್.ತಿಪ್ಪಣ್ಣ ನಿಧನಕ್ಕೆ ಗಣ್ಯರ ಸಂತಾಪ
ಬಳ್ಳಾರಿ, ಜುಲೈ 11: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಧಾನಪರಿಷತ್ ಮಾಜಿ ಸಭಾಪತಿ, ಹಿರಿಯ ಮುತ್ಸದ್ಧಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್.ತಿಪ್ಪಣ್ಣ (98) ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ ಗಾಂಧಿನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ತಿಪ್ಪಣ್ಣ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇಂದು ಬಳ್ಳಾರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಅವರ ಸ್ವಗ್ರಾಮ ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮದಲ್ಲಿ ತಿಪ್ಪಣ್ಣ ಅವರ ಪಾರ್ಥಿವ ಶರೀರದ…

