ಹೃದಯಾಘಾತಕ್ಕೆ ರಾಜ್ಯಾದ್ಯಂತ ಒಟ್ಟು 6 ಸಾವು!
ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಪಳಿ ಜೋರಾಗಿ ಮುಂದುವರೆದಿದೆ.ಕಳೆದೊಂದು ದಿನದಲ್ಲಿ ರಾಜ್ಯಾದ್ಯಂತ ಒಟ್ಟು 6 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ 4ನೇ ತರಗತಿ ವಿದ್ಯಾರ್ಥಿ! ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮನೋಜ್ ಕುಮಾರ್ (10), ಮೃತ ದುರ್ದೈವಿ. ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ ಪಾಠ ಕೇಳುತ್ತಿದ್ದಾಗ ಕುಸಿದುಬಿದ್ದು, ಮೃತಪಟ್ಟಿದ್ದಾನೆ. ಮೃತ ಮನೋಜ್ ಕುಮಾರ್ ಹೃದಯದಲ್ಲಿ ರಂಧ್ರ…

