Headlines

newsfilemagazine

ಭೂಒತ್ತುವರಿ ಆರೋಪ: ನ್ಯಾಯಾಂಗ ನಿಂದನೆ ಕೇಸ್ ನಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ.ಗೆ ರಿಲೀಫ್

ನವದೆಹಲಿ, ಜುಲೈ 17: ಬಿಡದಿ ಬಳಿ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರ ದ್ವಿಸದಸ್ಯ ಪೀಠ, ಮುಂದಿನ ಆದೇಶದವರೆಗೂ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ. ಹಿಂದಿನ ರಾಮನಗರ…

Read More

ಕೊನೆಗೂ ಕಿರುತೆರೆ ನಿರೂಪಕಿ ಅನುಶ್ರೀಗೆ ವಿವಾಹ ಭಾಗ್ಯ!

ಬೆಂಗಳೂರು, ಜುಲೈ 17: ಕನ್ನಡ ಕಿರುತೆರೆ ಲೋಕದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಮದುವೆ ಯಾವಾಗ? ಎಂದು ಹಲವಾರು ವರ್ಷಗಳಿಂದ ಪ್ರಶ್ನಿಸುತ್ತಿದ್ದ ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ಸಿಕ್ಕಿದೆ. ಏಕೆಂದರೆ ಇದೀಗ ಖ್ಯಾತ ಕಿರುತೆರೆ ನಿರೂಪಕಿ ಅನುಶ್ರೀ ಅವರಿಗೆ ಕೊನೆಗೂ ಕಂಕಣಭಾಗ್ಯ ಕೂಡಿ ಬಂದಿದ್ದು, ಮದುವೆಗೆ ಮುಹೂರ್ತ ಫಿಕ್ಸ್ ಕೂಡ ಆಗಿದೆ. ಅನುಶ್ರೀ ಮುಂದಿನ ಆಗಸ್ಟ್ 28ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆ ಆಗಲಿದ್ದು, ಬೆಂಗಳೂರಿನ ಸಾಫ್ಟ್ ವೇರ್ ಉದ್ಯಮಿಯನ್ನು ವರಿಸಲಿದ್ದಾರೆ. ಕುಟುಂಬಸ್ಥರು ನೋಡಿದ ಹುಡುಗನ ಜೊತೆಯೇ ಅನುಶ್ರೀ…

Read More

ಸಚಿವರ ಆಡಳಿತ ವೈಖರಿ ಪರಿಶೀಲಿಸಿದ ಸುರ್ಜೇವಾಲ

ಬೆಂಗಳೂರು, ಜುಲೈ 16: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೆವಾಲ ಅವರು ಇಂದು ಕೆಲ ಸಚಿವರ ಜೊತೆ ಪ್ರತ್ಯೇಕ ಸಭೆ ನಡೆಸಿದರು. ರಾಜ್ಯದ ಕೈ ಶಾಸಕರ ಜೊತೆ ಸಭೆ ನಡೆಸಿ ಅವರ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದ್ದ ಸುರ್ಜೆವಾಲ ಅವರು ಇಂದು ಸಚಿವರ ಜೊತೆ ಸಭೆ ನಡೆಸಿದ್ದಾರೆ. ಇಂದು ಬೆಳಗ್ಗೆ ಒಬ್ಬೊಬ್ಬ ಸಚಿವರ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿ, ಆಡಳಿತ ವೈಖರಿ, ಖಾತೆ ನಿರ್ವಹಣೆ, ಪಕ್ಷದ ನಾಯಕರು, ಮುಖಂಡರು,…

Read More

ತಿರುಪತಿಗೆ ತುಮುಲ್ ನಿಂದ ನಂದಿನಿ ತುಪ್ಪ ರವಾನೆ

ತುಮಕೂರು, ಜುಲೈ 16: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗಾಗಿ ತುಮಕೂರು ಹಾಲು ಒಕ್ಕೂಟದಿಂದ ಟಿಟಿಡಿ ದೇವಾಲಯಕ್ಕೆ(ತಿರುಮಲದ ತಿರುಪತಿ ತಿಮ್ಮಪ್ಪ ದೇವಾಲಯ) ನಂದಿನಿ ತುಪ್ಪ ಕೊಂಡೊಯ್ಯುವ ಟ್ಯಾಂಕರ್‌ ವಾಹನಕ್ಕೆ ತುಮುಲ್‌ ಅಧ್ಯಕ್ಷ ಹಾಗೂ ಶಾಸಕ ಹೆಚ್‌.ವಿ.ವೆಂಕಟೇಶ್‌ ಚಾಲನೆ ನೀಡಿದರು. ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ನೇರವಾಗಿ ತುಪ್ಪ ಪೂರೈಸುವ ಅವಕಾಶವನ್ನು ಕೆಎಂಎಫ್‌ ತನ್ನ ವ್ಯಾಪ್ತಿಯ ಹಾಲು ಒಕ್ಕೂಟಗಳಿಗೆ ಕಲ್ಪಿಸಿರುವುದರಿಂದ ತುಪ್ಪವನ್ನು ಟ್ಯಾಂಕರ್‌ ಮೂಲಕ ಟಿಟಿಡಿಗೆ ಪೂರೈಸುವ ಕಾರ್ಯವನ್ನು ತುಮುಲ್‌ ಆರಂಭಿಸಿದೆ. ಟಿಟಿಡಿಗೆ ತುಪ್ಪ ಕೊಂಡೊಯ್ಯುವ ಟ್ಯಾಂಕರ್‌ ವಾಹನಕ್ಕೆ ಚಾಲನೆ…

Read More

ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ: ಹೈಕೋರ್ಟ್ ತೀರ್ಪು

ಬೆಂಗಳೂರು, ಜುಲೈ 16: ಅವ್ಯವಹಾರ ವಿಡಿಯೋ ಸಾಕ್ಷಿ ಮೂಲಕ ಸಾಬೀತಾದ ಬೆನ್ನಲ್ಲಿಯೇ ಬೆಂಗಳೂರಿನ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಕೊಂಡಿದೆ. ಆದ್ರೆ, ಇದನ್ನು ಪ್ರಶ್ನಿಸಿ ದೇಗುಲದ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ರಾಜ್ಯಸರ್ಕಾರದ ಈ ಕ್ರಮಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.ಗಾಳಿ ಆಂಜನೇಯ ದೇವಾಲಯದಲ್ಲಿ ಹಣ ದುರುಪಯೋಗದ ಆರೋಪವಿದೆ. ಹೀಗಾಗಿ ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪೆನ್ನಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ…

Read More

ಕುಕ್ಕುಟ ಸಂಜೀವಿನಿ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿ:ಕೆ.ಆರ್.ನಂದಿನಿ

ಮಂಡ್ಯ.ಜು.16:- ಸ್ವ ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡಲು ಸರ್ಕಾರದಲ್ಲಿ ಅವಕಾಶವಿದೆ. ಆಸಕ್ತಿ ಹೊಂದಿರುವ ಸ್ವಸಹಾಯ ಗುಂಪುಗಳನ್ನು ಕುಕ್ಕುಟ ಸಂಜೀವಿನಿ ಯೋಜನೆಯಡಿ ಸೌಲಭ್ಯ ಪಡೆಯಲು ಪ್ರಸ್ತಾವನೆ ಸಲ್ಲಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ ಅವರು ಹೇಳಿದರು. ಮಂಗಳವಾರ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯ ಲಾಭ ಪಡೆದು ಮೇಕೆ ಮತ್ತು ಕೋಳಿ ಸಾಕಾಣಿಕೆಯಲ್ಲಿ ಯಶಸ್ಸು ಕಂಡ ಮದ್ದೂರು ತಾಲೂಕಿನ ತೈಲೂರು ಗ್ರಾಮದ ಕೃಷಿಕ ಜಗದೀಶ್…

Read More

ಬಿಎಂಟಿಸಿ-ಕೆ.ಎಸ್.ಆರ್.ಟಿ.ಸಿ ಸೇರಿ 4 ನಿಗಮಗಳಿಂದ ಆಗಸ್ಟ್ 5 ರಂದು ಸಾರಿಗೆ ಮುಷ್ಕರಕ್ಕೆ ಕರೆ

ಬೆಂಗಳೂರು, ಜುಲೈ 16: ರಾಜ್ಯದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಂದಿನ ಆಗಸ್ಟ್​ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳ ಸಾರಿಗೆ ನೌಕರರು ಈ ಮುಷ್ಕರಕ್ಕೆ ಮುಂದಾಗಿದ್ದಾರೆ. ಕಳೆದ ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು. ಆದರೆ…

Read More

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಲು ಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು, ಜುಲೈ 15: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ಬಿ.ಎಂ.ಪಾರ್ವತಿ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖಾ ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ (ಜು.15) ಖಾಸಗಿ ದೂರು ವಿಚಾರಣೆ ನಡೆಯಿತು. ವಿಚಾರಣೆಗೂ ಮುನ್ನ ಲೋಕಾಯುಕ್ತ ತನಿಖಾಧಿಕಾರಿ ಈವರೆಗಿನ ತನಿಖಾ ಪ್ರಗತಿ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದರು. ಈ ವೇಳೆ, ದೂರುದಾರ ಸ್ನೇಹಮಯಿ ಕೃಷ್ಣ ಅವರು, “ತಾವು ಸಲ್ಲಿಸಿದ ದಾಖಲೆಗಳನ್ನು ಲೋಕಾಯುಕ್ತ…

Read More

ಪಂಚಭೂತಗಳಲ್ಲಿ ಅಭಿನಯ ಸಾಮ್ರಾಜ್ಞಿ ಬಿ‌.ಸರೋಜಾದೇವಿ ಲೀನ

ಬೆಂಗಳೂರು/ಚನ್ನಪಟ್ಟಣ, ಜುಲೈ 15: ಹಲವು ದಶಕಗಳ ಕಾಲ ಬಹುಭಾಷೆಗಳಲ್ಲಿ ನಟಿಸಿದ್ದ ಕನ್ನಡದ ಮೊಟ್ಟಮೊದಲ ಸೂಪರ್‌ ಸ್ಟಾರ್‌ ನಟಿ ಪ್ರತಿಷ್ಠಿತ ಪದಭೂಷಣ ಪ್ರಶಸ್ತಿ ಪುರಸ್ಕೃತೆ ಬಿ.ಸರೋಜಾದೇವಿ ಅವರು ಪಂಚಭೂತಗಳಲ್ಲಿ ಇಂದು ಲೀನವಾದರು. ಕುಟುಂಬ ಸದಸ್ಯರ ಆಕ್ರಂದನ, ಅಭಿಮಾನಿಗಳ ಭಾರ ಹೃದಯದ ನಡುವೆಯೇ ವಯೋಸಹಜತೆಯಿಂದ ನಿಧನರಾಗಿದ್ದ ಬಿ.ಸರೋಜಾದೇವಿ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಸ್ವಗ್ರಾಮ ದಶವಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಿಸಲಾಯಿತು. ಅವರ ಪುತ್ರ ಗೌತಮ್‌ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿಕೊಟ್ಟರು.: ಸುಮಾರು…

Read More

ರೈತರ ಹೋರಾಟಕ್ಕೆ ಮಣಿದ ರಾಜ್ಯಸರ್ಕಾರದಿಂದ ದೇವನಹಳ್ಳಿ ಭೂಸ್ವಾಧೀನ ರದ್ದು!

ಬೆಂಗಳೂರು, ಜುಲೈ 15: ಕೃಷಿ ಭೂಮಿಯನ್ನು ಸ್ವಾಧೀನ ಮಾಡುವ ಕ್ರಮಕ್ಕೆ ವಿರೋಧಿಸಿ ನೊಂದ ರೈತರು ನಡೆಸಿದ ಸತತ ಹೋರಾಟಕ್ಕೆ‌ ಕೊನೆಗೂ ಮಣಿದಿರುವ ರಾಜ್ಯಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಸ್ಥಾಪನೆಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಟ್ಟು ತತ್‌ಕ್ಷಣದಿಂದಲೇ ಅನ್ವಯವಾಗುವಂತೆ ಅಧಿಸೂಚನೆಯನ್ನು ರದ್ದುಪಡಿಸಿದೆ. ಇದರಿಂದಾಗಿ ಕಳೆದ ಹಲವು ತಿಂಗಳಿನಿಂದ ತಮ್ಮ ಜಮೀನು ಉಳಿಸಿಕೊಳ್ಳಲು ಪ್ರತಿಭಟನೆ ನಡೆಸುತ್ತಿದ್ದ ಅನ್ನದಾತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಸಿಎಂ…

Read More
error: Content is protected !!