ಮಂಡ್ಯ ತಾಲ್ಲೂಕಿನಲ್ಲಿ ಶಾಲಾ ಫಲಿತಾಂಶ ಸುಧಾರಣೆ, ಆರೋಗ್ಯ-ಕೃಷಿ-ಪ್ರಾಣಿ ಸಂಪನ್ಮೂಲ ಅಭಿವೃದ್ಧಿಗೆ ಶಾಸಕ ಪಿ. ರವಿಕುಮಾರ್ ಸೂಚನೆ
ಮಂಡ್ಯ.ನ.18:- ಮಂಡ್ಯ ತಾಲ್ಲೂಕು ವ್ಯಾಪ್ತಿಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ವೃದ್ಧಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ ರವಿಕುಮಾರ್ ಅವರು ಹೇಳಿದರು. ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಂಡ್ಯ ತಾಲ್ಲೂಕು ವ್ಯಾಪ್ತಿಯ ಕೆಲವು ಆಸ್ಪತ್ರೆಗಳಲ್ಲಿ ವೈದ್ಯರು ರಾತ್ರಿ ವೇಳೆಯಲ್ಲಿ ಇರುವುದಿಲ್ಲವೆಂದು ದೂರು ಕೇಳಿ ಬರುತ್ತಿವೆ ಎಲ್ಲಾ ಆಸ್ಪತ್ರೆಗಳಲ್ಲೂ…

