”ಯಾವ ರೀತಿ ಕ್ರಾಂತಿ ಆಗುತ್ತೋ ನೋಡೋಣ”: ಕಾಂಗ್ರೆಸ್ ಆಂತರಿಕ ಕಲಹಕ್ಕೆ ಕುತೂಹಲ ವ್ಯಕ್ತಪಡಿಸಿದ ಎಚ್‌ಡಿಕೆ.
ಮಾಲೂರು (ಕೋಲಾರ): ರಾಜ್ಯ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿಯ ಕುರಿತು ರಾಜ್ಯ ಸರ್ಕಾರವು ತಕ್ಷಣವೇ ಸ್ಪಷ್ಟನೆಯನ್ನು ನೀಡಿ ವಾಸ್ತವಾಂಶವನ್ನು ಜನರ ಮುಂದೆ ತೆರೆದಿಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೋಮವಾರ ನಗರದಲ್ಲಿ ಒತ್ತಾಯಿಸಿದ್ದಾರೆ. ಸಚಿವರನ್ನು ನಂಬಿರುವ ಅಭಿಮಾನಿಗಳು ಮತ್ತು ಕ್ಷೇತ್ರದ ಜನರ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕಿದೆ ಎಂದು ಅವರು ತಿಳಿಸಿದರು. ಇದೇ ವೇಳೆ, ಹೆಬ್ಬಟ್ಟಿನ ಗುರುತು ಮತ್ತು ದುರುಪಯೋಗದ ಕುರಿತಾದ ತಮ್ಮ ಹಿಂದಿನ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಕೆಲ ದುರ್ಬುದ್ಧಿಯ…

