ಜೈಲಿನಲ್ಲೇ ಖೈದಿಗಳಿಗೆ ರಾಜಾತಿಥ್ಯ: ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್
ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರ ಸಂಬಂಧ ಜೈಲಿನ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಅಧೀಕ್ಷಕ ಮ್ಯಾಗೇರಿ ಮತ್ತು ಉಪಾಧೀಕ್ಷಕರಾದ ಅಶೋಕ್ ಭಜಂತ್ರಿ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಜೊತೆಗೆ ಈ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿ ಗೃಹ ಸಚಿವರು ಆದೇಶಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಘಟನೆ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ…

