ಶೇ.50 ಸಚಿವರ ಬದಲಾವಣೆಯೊಂದಿಗೆ ನವೆಂಬರ್ ನಲ್ಲಿ ಸಂಪುಟ ಪುನಾರಚನೆ: ಸಲೀಂ ಅಹ್ಮದ್
ನವದೆಹಲಿ, ಸೆ.22: ರಾಜ್ಯ ರಾಜಕೀಯದಲ್ಲಿ ಸದ್ದಿಲ್ಲದೇ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನವೆಂಬರ್ ಗೆ ಎರಡುವರೆ ವರ್ಷ ಪೂರ್ಣಗೊಳಿಸುತ್ತದೆ. ಹೀಗಾಗಿ ನವೆಂಬರ್‌ನಲ್ಲಿ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. ಇದಕ್ಕೆ ಪೂರಕವೆಂಬಂತೆ ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು, ಕರ್ನಾಟಕದಲ್ಲಿ ನವೆಂಬರ್ ತಿಂಗಳಲ್ಲಿ ಸಚಿವ ಸಂಪುಟ ಪುನಾರಚನೆಯಾಗಲಿದೆ. ಈ ವೇಳೆ ಶೇ.50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದರು. ಸಚಿವ ಸ್ಥಾನದಿಂದ ಹೊರ ಬಂದವರಿಗೆ…

