ಪದ್ಮಭೂಷಣ ಹಿರಿಯ ಸಾಹಿತಿ ಎಸ್.ಎಸ್ ಭೈರಪ್ಪ ಅಸ್ತಂಗತ
ಬೆಂಗಳೂರು, ಸೆ.24: ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಬಳಲುತ್ತಿದ್ದ ಭೈರಪ್ಪ ಅವರಿಗೆ ಮರವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು, ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ…

