ಧರ್ಮಸ್ಥಳ ಕೇಸ್: ಅನಾಮಿಕನನ್ನು ವಶಕ್ಕೆ ಪಡೆಯಲು ಎಸ್ಐಟಿ ಚಿಂತನೆ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಅನಾಮಿಕ ನೀಡಿರುವ ದೂರಿನಂತೆ ನಡೆಸಲಾಗುತ್ತಿದ್ದ ಉತ್ಖನನವನ್ನು ಸದ್ಯಕ್ಕೆ ಸ್ಥಗಿತಗೊಳಿಸಿರುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಸೋಮವಾರ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಎಸ್ಐಟಿ ಅನಾಮಿಕನನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ದೂರಿನ ಮೇಲೆಯೇ ಸದ್ಯ ಅನುಮಾನ ವ್ಯಕ್ತವಾದ ಕಾರಣ ಆತನನ್ನು ವಶಕ್ಕೆ ಪಡೆಯಲು ಎಸ್ಐಟಿ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ದೂರುದಾರ ಅನಾಮಿಕನನ್ನು ಸುಪರ್ದಿಗೆ ಪಡೆದು ವಿಚಾರಣೆಗೆ ಒಳಪಡಿಸಿದರೆ ಹೆಚ್ಚಿನ ಮಾಹಿತಿ ದೊರೆಯುವ ಸಾಧ್ಯತೆ ಇರುವುದರಿಂದ ಈ ಕ್ರಮಕ್ಕೆ ಎಸ್ಐಟಿ ಮುಂದಾಗಿದೆ…

