ದೆಹಲಿಯಲ್ಲಿ ಸಿಎಂ–ಡಿಸಿಎಂ ರಹಸ್ಯ ಮಾತುಕತೆ: ಸಚಿವ ಸಂಪುಟ ಪುನರ್ ರಚನೆ ಚುರುಕು
ಕಳೆದ ಹಲವು ದಿನಗಳಿಂದ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕಾಗಿವೆ. ಸಚಿವ ಸಂಪುಟ ಪುನರ್ರಚನೆಯಾಗಲಿದೆ ಎಂಬ ಚರ್ಚೆಯ ನಡುವೆ ಒಬ್ಬರಾದ ಮೇಲೆ ಒಬ್ಬರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರುಗಳು ದೆಹಲಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ರಹಸ್ಯ ಮಾತುಕತೆ ನಡೆಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ನಿವಾಸ ಕಳೆದ ಎರಡು ದಿನಗಳಿಂದ ರಾಜ್ಯದ ವಿಚಾರಕ್ಕೆ ಹೆಚ್ಚು ಸದ್ದು ಮಾಡಿದೆ. ಯಾಕಂದರೆ, ಮೊನ್ನೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಹೋದರ ಡಿಕೆ…

