ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಖಾಸಗಿ ಅಂಬುಲೆನ್ಸ್ ದರ್ಬಾರ್: ಕ್ರಮಕ್ಕೆ ಸಾರ್ವಜನಿಕರ ಆಗ್ರಹ
ಸಕಲೇಶಪುರ:ಇಲ್ಲಿನ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಖಾಸಗಿ ಅಂಬುಲೆನ್ಸ್‌ಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸುವ ರೋಗಿಗಳು ಹಾಗೂ ಅವರ ಸಂಬಂಧಿಕರನ್ನು ಖಾಸಗಿ ಅಂಬುಲೆನ್ಸ್ ಚಾಲಕರು ಒತ್ತಾಯಪೂರ್ವಕವಾಗಿ ತಮ್ಮ ವಾಹನಗಳಲ್ಲಿ ಕರೆದೊಯ್ಯಲು ಯತ್ನಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ.ಆಸ್ಪತ್ರೆಯ ಆವರಣದಲ್ಲಿಯೇ ಈ ರೀತಿಯ ಅಕ್ರಮ ಚಟುವಟಿಕೆಗಳು ಬಹಿರಂಗವಾಗಿ ನಡೆಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಶಂಕೆ ಈ ಕಳವಳಕಾರಿ ವಿಚಾರವನ್ನು…

