Headlines

ಧರ್ಮಸ್ಥಳ ಕೇಸ್: ಸುಳ್ಳು ಮಾಹಿತಿ ನೀಡಿದ್ದ ವಕೀಲರಿಗೆ ಸಂಕಷ್ಟ!

ಧರ್ಮಸ್ಥಳ ಬಳಿ ಶವಗಳನ್ನು ಹೂತಿಟ್ಟ ಕೇಸ್ ನಲ್ಲಿ ಎಸ್ಐಟಿ ತನಿಖಾ ತಂಡಕ್ಕೆ ಸುಳ್ಳು ಮಾಹಿತಿ ನೀಡಿದ್ದ ವಕೀಲ ಮಂಜುನಾಥ್ ಮ ವಿರುದ್ಧ ಬೆಳ್ತಂಗಡಿ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ ನೀಡಿದ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ. ಧರ್ಮಸ್ಥಳದಲ್ಲಿ ಯಥೇಚ್ಛವಾಗಿ ಹೆಣ ಹೂತಿದ್ದಾಗಿ ವಕೀಲ ಮಂಜುನಾಥ್​ ಜುಲೈ 30 ರಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು. ವಕೀಲ ಮಂಜುನಾಥ್​ ಹೇಳಿದ್ದೇನು?ಪಾಯಿಂಟ್ ನಂಬರ್ 1ರಲ್ಲಿ 2 ಹೆಣ, ಪಾಯಿಂಟ್ ನಂ 2, 3ರಲ್ಲಿ ತಲಾ 2…

Read More

ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಪ್ರತೀ ಸೋಮವಾರ ಸಾರ್ವಜನಿಕ ಕುಂದುಕೊರತೆ ಸಭೆ : ಕೆ.ಆರ್ ನಂದಿನಿ 

ಮಂಡ್ಯ.ಆ18:- ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಪ್ರತೀ ಸೋಮವಾರ ಸಾರ್ವಜನಿಕರ ಕುಂದುಕೊರತೆ ಸಭೆಗಳನ್ನು ಆಯೋಜಿಸುವಂತೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಸೂಚಿಸಿದ್ದ ಹಿನ್ನಲೆಯಲ್ಲಿ ಇಂದು ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆಗಳನ್ನು ಆಯೋಜಿಸಲಾಗಿರುತ್ತದೆ. ಸಾರ್ವಜನಿಕರು ಸರ್ಕಾರಿ ಕೆಲಸಗಳಿಗೆ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಹಾಗೂ ನಿಗಧಿತ ಅವಧಿಯೊಳಗೆ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತೀ ಸೋಮವಾರ ಸಾರ್ವಜನಿಕ ಕುಂದು ಕೊರತೆ ಸಭೆಗಳನ್ನು ಆಯೋಜಿಸುವಂತೆ ಜಿಲ್ಲೆಯ…

Read More

ಧರ್ಮಸ್ಥಳ ಸುತ್ತಮುತ್ತ ಶವಗಳನ್ನು ಹೂತಿಟ್ಟ ಕೇಸ್: 13ನೇ ಪಾಯಿಂಟ್ ನಲ್ಲಿ ಜಿಪಿಆರ್ ನಿಂದ ಪರಿಶೀಲನೆ

ಬೆಳ್ತಂಗಡಿ, ಆಗಸ್ಟ್ 12: ತಾಲ್ಲೂಕಿನ ಧರ್ಮಸ್ಥಳ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ದೂರುದಾರ ಗುರುತಿಸಿರುವ 13ನೇ ಸ್ಥಳದಲ್ಲಿ ಡ್ರೋನ್‌ ಜಿಪಿಆರ್‌ ಮೂಲಕ ಎಸ್‌‍ಐಟಿ ಇಂಚಿಂಚೂ ಕಾರ್ಯಾಚರಣೆ ನಡೆಸುತ್ತಿದೆ. ದೆಹಲಿಯಿಂದ ನಾಲ್ವರ ಜಿಪಿಆರ್‌ ತಂಡ ಮಂಗಳೂರಿಗೆ ನಿನ್ನೆ ಬಂದಿದ್ದು, ಇಂದು ಎಸ್‌‍ಐಟಿ ತಂಡ ಈ ಸ್ಥಳದಲ್ಲಿ ಡ್ರೋನ್‌ ಜಿಪಿಆರ್‌ ಮೂಲಕ ಅಸ್ಥಿಪಂಜರದ ಅವಶೇಷಗಳೇನಾದರೂ ಪತ್ತೆಯಾಗಬಹುದೇ? ಎಂಬುದನ್ನು ಎದುರು ನೋಡುತ್ತಿದೆ. ದೂರುದಾರ ಗುರುತಿಸಿರುವ 13ನೇ ಸ್ಥಳ ನೇತ್ರಾವತಿ -ಅಜೆಕುರಿ ರಸ್ತೆಯ ನೇತ್ರಾವತಿ ನದಿ ಪಕ್ಕದಲ್ಲೇ ಇರುವ ಕಿಂಡಿ ಅಣೆಕಟ್ಟಿನ ಸಮೀಪವಿರುವುದರಿಂದ ಉತ್ಖನನ…

Read More

ಪ್ರಧಾನಿ ಮೋದಿಯವರ ನಾಳಿನ‌ ಬೆಂಗಳೂರು ಕಾರ್ಯಕ್ರಮಗಳ ವೇಳಾಪಟ್ಟಿ..

ಬೆಂಗಳೂರು, ಆಗಸ್ಟ್ 9: ಮೆಟ್ರೋದ ಹಳದಿ ಮಾರ್ಗ​ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್​ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಕುರಿತು ವೇಳಾಪಟ್ಟಿ ಹಂಚಿಕೊಂಡಿರುವ ಸಿಎಂ ಕಚೇರಿ, ಮೋದಿ 4 ಗಂಟೆಗಳ ಕಾಲ ಇರಲಿದ್ದು, ಈ ವೇಳೆ ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಹೆಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ, ಕೆಎಸ್​ಆರ್​ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಲಿದ್ದು, ಅಲ್ಲಿ ಬೆಂಗಳೂರು-…

Read More

ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೊಟ್ರು ಹೊಸ ಅಪ್ ಡೇಟ್…

ಧಾರವಾಡ, ಆಗಸ್ಟ್ 3: ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ವರಿಷ್ಠರು ಯಾರನ್ನು ಆಯ್ಕೆ ಮಾಡಬಹುದು ಎನ್ನುವ ಗೊಂದಲ ಇನ್ನೂ ಮುಂದುವರಿದಿದೆ. ರೆಬೆಲ್ ಟೀಂ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ವಿಜಯೇಂದ್ರ ಅವರನ್ನೇ ಮುಂದುವರಿಸಬೇಕೆಂದು ಮತ್ತೊಂದು ಬಣ ಬಿಗಿಪಟ್ಟು ಹಿಡಿದಿದೆ. ಹೀಗಾಗಿ ಬೇರೆ ಹಲವು ರಾಜ್ಯಗಳಲ್ಲಿ ಅಧ್ಯಕ್ಷರ ಘೋಷಣೆಯಾಗಿದ್ದರೂ, ಕರ್ನಾಟಕ, ಉತ್ತರ ಪ್ರದೇಶ, ಗುಜರಾತ್ ಮುಂತಾದ ರಾಜ್ಯಗಳಲ್ಲಿ ಇನ್ನೂ ಹೆಸರು ಘೋಷಣೆಯಾಗದೇ ವಿಳಂಬವಾಗಿತ್ತು. ಈ ನಡುವೆ ಕೇಂದ್ರ ಸಚಿವ ಪ್ರಹ್ಲಾದ್…

Read More

ದರ್ಶನ್ ಫ್ಯಾನ್ಸ್ ವಿರುದ್ಧದ ಸಮರದಲ್ಲಿ ರಮ್ಯಾ ಪರ ನಿಂತ ಶಿವರಾಜ್ ಕುಮಾರ್

ಬೆಂಗಳೂರು, ಜುಲೈ 29: ತಮ್ಮ ವಿರುದ್ಧ ಅಶ್ಲೀಲ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿರುವ, ಅಶ್ಲೀಲವಾಗಿ ಕಮೆಂಟ್ ಮಾಡುತ್ತಾ ನಿಂದಿಸುತ್ತಿರುವ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಸಮರ ಸಾರಿದ್ದಾರೆ. ದರ್ಶನ್ ಅಭಿಮಾನಿಗಳ ದುರ್ವರ್ತನೆಯನ್ನು ಸಾಮಾಜಿಕ ಜಾಲತಾಣದ ಮೂಲಕ ಖಂಡಿಸುತ್ತಿದ್ದ ರಮ್ಯಾ ಇದೀಗ ಕಾನೂನು ಮೊರೆ ಹೋಗಿದ್ದು, ಪೊಲೀಸರಿಗೆ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಅಗತ್ಯ ದಾಖಲೆಗಳನ್ನು ನೀಡಿದ್ದಾರೆ. ಆನ್​ಲೈನ್ ಟ್ರೋಲಿಂಗ್ ವಿರುದ್ಧ ರಮ್ಯಾ ಮಾಡುತ್ತಿರುವ ಈ ಸಮರದಲ್ಲಿ ರಮ್ಯಾಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು (ಜುಲೈ 29)…

Read More

ಎಚ್ಐವಿ ಪೀಡಿತ ತಮ್ಮನನ್ನು ಕೊಲೆಗೈದ ಅಕ್ಕ, ಕೊಲೆಗೆ ಸಾಥ್ ನೀಡಿದ ಪತಿ..!?

ಹೊಳಲ್ಕೆರೆ, ಜುಲೈ 28: ಹೆಚ್‌ಐವಿ ಪೀಡಿತನಾಗಿದ್ದ ತಮ್ಮನಿಂದ ನಮ್ಮ ಮನೆ ಮರ್ಯಾದೆ ಹೋಗುತ್ತದೆ ಎಂದು ಸ್ವತಃ ಅಕ್ಕನೇ ತನ್ನ ಗಂಡನ ಜೊತೆ ಸೇರಿ ಆತನನ್ನು ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದಲ್ಲಿ ನಡೆದಿದೆ. ಹೀಗೆ ತನ್ನ ಒಡಹುಟ್ಟಿದ ಅಕ್ಕನಿಂದಲೇ ಕೊಲೆಗೀಡಾದ ಯುವಕನನ್ನು ಮಲ್ಲಿಕಾರ್ಜುನ್‌(23) ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೊಲೆಗೀಡಾದ ಮಲ್ಲಿಕಾರ್ಜುನನ ಅಕ್ಕ ನಿಶಾ ಹಾಗೂ ಆಕೆಯ ಪತಿ ಮಂಜುನಾಥ್‌ ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಮಲ್ಲಿಕಾರ್ಜುನ್‌ ಬೆಂಗಳೂರಿನಲ್ಲಿ ಗಾರ್ಮೆಂರ್ಟ್‌ನಲ್ಲಿ…

Read More

ಪರಿಶಿಷ್ಟ ಜಾತಿ-ಪಂಗಡಗಳಿಗೆ ಮೀಸಲಿಟ್ಟ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ!

ಬೆಂಗಳೂರು, ಜುಲೈ 28: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನದಿಂದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಬಳಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಮ್ಮೆ ವಿವಾದ ಮೈಮೇಲೆ ಎಳೆದುಕೊಂಡಿದೆ. ಎಸ್​ಸಿ, ಎಸ್​ಟಿಗೆ ಮಾತ್ರ ಮೀಸಲಿಟ್ಟ ಎಸ್​ಸಿಎಸ್​​ಪಿ-ಟಿಎಸ್​​ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಮುಂದಾಗಿದೆ. ಎಸ್​ಸಿಎಸ್​​ಪಿ-ಟಿಎಸ್​​ಪಿ (ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ) ಯೋಜನೆಯಡಿ 2025-26ರ ಸಾಲಿನಲ್ಲಿ 42,017.51 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈ…

Read More

ಶಾಸಕ ಕೆ.ಎಂ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಿ ಎಂದ ಸಚಿವ ಜಮೀರ್

ಹಾಸನ, ಜುಲೈ 26: ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ಆಯೋಜಿಸಿದ ಗ್ಯಾರಂಟಿ ಯೋಜನೆ ಫಲಾನುಭವಿ ಸಮಾವೇಶದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದರು.ಈ ವೇಳೆ ಅಬ್ಬರದ ಭಾಷಣ ಮಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ತಮ್ಮ ಮಾತುಗಳ ಕೊನೆಯಲ್ಲಿ ಸ್ಥಳೀಯ ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡರ ಪರ ಮಾತನಾಡಿ ಇವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದಾಗ ಜಮೀರ್ ಅಹ್ಮದ್ ಮತ್ತು…

Read More

ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!

ಬೆಂಗಳೂರು, ಜುಲೈ 25: ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ 2ನೇ ಬಾರಿ ಜಾಮೀನು ಪಡೆಯಲು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಫಲರಾಗಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ನ್ಯಾ. ಎಸ್.ಜಿ.ಭಟ್ ಅವರು ಇಂದು ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧಿತ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.ಇದರಿಂದ ಅನೇಕ ಲೈಂಗಿಕ ದೌರ್ಜನ್ಯ ಪ್ರಕರಣಗಳ ಆರೋಪಗಳ ಪ್ರಕರಣಗಳಲ್ಲಿ ಎ1 ಆರೋಪಿಯಾಗಿ ಕಳೆದ 14 ತಿಂಗಳಿನಿಂದ ಜೈಲಿನಲ್ಲಿ ಬಂಧನಕ್ಕೊಳಗಾಗಿರುವ ಹಾಸನ…

Read More
error: Content is protected !!