ಚಾಮರಾಜನಗರ: 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಗೆ ಚಾಲನೆ; ನಿಯಮ ಪಾಲನೆಗೆ ನ್ಯಾಯಾಧೀಶರ ಕರೆ
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ, ಜನವರಿ 06 :- ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಜೀವಗಳ ರಕ್ಷಣೆ ಹಾಗೂ ರಸ್ತೆ ಸುರಕ್ಷತೆಗಾಗಿ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ ಅವರು ಸಲಹೆ ಮಾಡಿದರು. ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ…

